ಸುದ್ದಿಮೂಲ ವಾರ್ತೆ
ಮೈಸೂರು, ನ.10 :ಬಿಜೆಪಿಯ ಬರ ಪರಿಸ್ಥಿತಿ ಅಧ್ಯಯನ ಕೇವಲ ನಾಟಕವಲ್ಲ ಎಂದು ಬಿಜೆಪಿ ಶಾಸಕ ಶ್ರೀವತ್ಸ ಅವರು, ಅಧ್ಯಯನ ಕೇವಲ ನಾಟಕ ಎಂದಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕರು ಪ್ರಾಮಾಣಿಕವಾಗಿ ಬರ ಪರಿಸ್ಥಿತಿ ಅಧ್ಯಯನ ಮಾಡುತ್ತಿದ್ದು,ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.ನಾವು ಭೇಟಿ ನೀಡಿದ ಸ್ಥಳಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ.ಬೆಳೆಗಳು ಒಣಗಿ ಹೋಗಿವೆ.ಕುಡಿಯುವ ನೀರಿಗೂ ಸಮಸ್ಯೆ ಇದೆ.ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ.ಈ ಎಲ್ಲಾ ಸಮಸ್ಯೆಗಳನ್ನು ನಾವು ಕಣ್ಣಾರೆ ಕಂಡಿದ್ದು, ವರದಿ ಸಿದ್ದ ಮಾಡಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.