ಶಿಡ್ಲಘಟ್ಟ, ಮೇ 18: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 91ನೇ ಹುಟ್ಟುಹಬ್ಬವನ್ನು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಶಿಡ್ಲಘಟ್ಟ ನೂತನ ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಬಿ.ಎನ್. ರವಿಕುಮಾರ್, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈ ಹಿಡಿದಿದ್ದಕ್ಕೆ ಧನ್ಯವಾದಗಳು. ನಾಳೆ ಮೇ 18ರ ಗುರುವಾರ ಮಾಜಿ ಪ್ರಧಾನಿ ದೇವೇಗೌಡರ 91ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಆಶಾಕಿರಣ ಅಂಧ ಮಕ್ಕಳ ಶಾಲೆಯ ಮಕ್ಕಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಗೂ ಹೊರರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಟ್ಟೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ನನ್ನದೇ ಆದ ಶೈಲಿಯಲ್ಲಿ ಶಿಡ್ಲಘಟ್ಟ ತಾಲ್ಲೂಕನ್ನು ರಾಜ್ಯದಲ್ಲಿಯೇ ಮಾದರಿಯಾಗಿ ಅಭಿವೃದ್ಧಿ ಮಾಡುವ ಉದ್ದೇಶ ಹೊಂದಲಾಗಿದೆ. ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ತಾಲ್ಲೂಕು ಕಛೇರಿಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿ ತಾಲ್ಲೂಕಿನ ಎಲ್ಲಾ ಸರ್ಕಾರ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಕ್ತವಾಗಿ ಅಧಿಕಾರ ಒದಗಿಸಿವೆ. ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಜನತೆ ಮೂಲ ಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ನಾನು ಚುನಾವಣೆ ಪ್ರಚಾರ ಸಮಯದಲ್ಲಿ ಕಣ್ಣಾರೆ ಕಂಡಿದ್ದು ನನ್ನ ಅಧಿಕಾರ ಅವಧಿಯಲ್ಲಿ ಮಧ್ಯವರ್ತಿಗಳಿಗೆ ಮಣೆ ಹಾಕದೆ ಉತ್ತಮ ರೀತಿಯಲ್ಲಿ ಮೂಲಭೂತ ಸೌರ್ಯಗಳನ್ನು ಒದಗಿಸಿಕೊಡುತ್ತೇನೆ. ಕ್ಷೇತ್ರದ ಜನತೆಯ ಕುಂದು ಕೊರತೆಗಳನ್ನು ಆಲಿಸಲು ತಿಂಗಳಿಗೊಮ್ಮೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಸದಾಶಿವ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಮೇಲೂರು ಮಂಜುನಾಥ್, ತಾದೂರೂ ರಘು, ವಿಜಯ ಭಾವರೆಡ್ಡಿ, ಮುಗಲಡಪಿ ನಂಜಪ್ಪ, ಮಿಲ್ಟ್ರಿ ರಘು, ಎಸ್.ಎಂ. ರಮೇಶ್, ನಂಧಕಿಶನ್, ಗಂಜಿಗುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಿಂಹಮೂರ್ತಿ ಜೆಡಿಎಸ್ ಗ್ರಾಮ ಪಂಚಾಯತಿ ಸದಸ್ಯ ಸಿ.ಕೆ ಗಜೇಂದ್ರ ಬಾಬು, ಭಕ್ತರಹಳ್ಳಿ ಮಂಜುನಾಥ್, ಮುಖಂಡರು ಇನ್ನು ಮುಂತಾದವರು ಹಾಜರಿದ್ದರು.