ರಾಯಚೂರು, ಜೂ.03 :ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲರು ಚಾಲನೆ ನೀಡಿದರು.
ಇಂದು ಬೆಳಗ್ಗೆ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಿದ ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಮೊದಲ ದಿನದ ಕರ್ನಾಟಕ ರಾಜ್ಯ ಕ್ಕೆ ಸೀಮಿತ ಎತ್ತುಗಳು ಭಾರ ಎಳೆಯುವ ಸ್ಪರ್ಧೆ ಆರಂಭವಾಗಿದೆ.
ರಾಯಚೂರು ಸೇರಿ ವಿವಿಧ ಜಿಲ್ಲೆಯ ಜೋಡೆತ್ತುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಒಂದುವರೇ ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ನಡೆಯುತ್ತಿದೆ.
ಸ್ಪರ್ಧೆ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿ ದ್ದಾರೆ.