ಸುದ್ದಿಮೂಲ ವಾರ್ತೆ.
ಬೆಳಗಾವಿ, ಮಾ.20: ವಿಧಾನಸಭಾ ಚುನವಣೆಗೆ ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಕಾರ್ಡ್ಗಳಲ್ಲಿ ಮತ್ತೊಂದು 4ನೇ ಗ್ಯಾರಂಟಿ ಕಾರ್ಡ್ ಸೇರ್ಪಡೆಗೊಂಡಿದೆ. ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂಪಾಯಿ ನೀಡಲಾಗುತ್ತದೆ
ಕಾಂಗ್ರೆಸ್ ಪಕ್ಷದಿಂದ ಇಂದು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದರು.
ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2000 ರೂ ಸಹಾಯ ಧನ ಮತ್ತು ಅನ್ನ ಭಾಗ್ಯ ಯೋಜನೆಯಡಿ ಬಿ.ಪಿ.ಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತ ಎಂದು 3 ಗ್ಯಾರಂಟಿ ಕಾರ್ಡ್ ಘೊಷಿಸಲಾಗಿತ್ತು. ಆದೇ ರೀತಿ ಇಂದು ಬೆಳಗಾವಿಯಲ್ಲಿ ನಡೆದ ಯುವನಿಧಿ ಯೋಜನೆಯಡಿ 4ನೇ ಗ್ಯಾರಂಟಿ ಕಾರ್ಡ್ ಘೋಷಿಸಲಾಗಿದೆ.
ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಸಿದ್ದರಾಮಯ್ಯ ಹಾಜರಿದ್ದರು.