ರಸ್ತೆ ಅಪಘಾತದಲ್ಲಿ ತಾಯಿ ಮಗ ಸಾವು
ಕೊಪ್ಪಳ,ಜೂ.13: ಕೊಪ್ಪಳ ತಾಲೂಕಿನ ಮಂಗಳಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಬೈಕೊಂಡು ಗುದ್ದಿ ಸ್ಥಳದಲ್ಲಿಯೇ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.


ಮೃತರನ್ನು ಗದಗ್ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದ ಪುಟ್ಟರಾಜು ವಸ್ತ್ರದ(46) ಹಾಗೂ ಗಂಗಮ್ಮ ವಸ್ತ್ರದ(70) ಗುರುತಿಸಲಾಗಿದೆ. ಇವರು ಗಜೇಂದ್ರಗಡ ದಿಂದ ಕೊಪ್ಪಳ ಮಾರ್ಗವಾಗಿ ಹೊಸಪೇಟೆಗೆ ಬೈಕ್ ನಲ್ಲಿ ತೆರಳುತ್ತಿದ್ದರು.
ತಾಲೂಕಿನ ಮಂಗಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪಕ್ಕದಲ್ಲಿ ನಿಂತಿರುವ ಲಾರಿಗೆ ಇವರ ದ್ವಿಚಕ್ರ ವಾಹನವು ಗುದ್ಧಿ ಇಬ್ಬರು ತೀವ್ರ ಅಪಘಾತಕ್ಕೆ ಒಳಗಾಗಿ ರಕ್ತಸ್ರಾವದಿಂದ ಬಳಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಅಪಘಾತ ಘಟನಾ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದು ಪ್ರಕರಣ ನಡೆದಿದೆ.