ಸುದ್ದಿ ಮೂಲ ವಾರ್ತೆ
ಚಿಕ್ಕಬಳ್ಳಾಪುರ, ಆ.೨೨: ವಯಸ್ಸಾಯ್ತು ಸಕ್ರಿಯವಾಗಿ ರಾಜಕಾರಣದಲ್ಲಿ ಇರಲಾರೆ 50 ವರ್ಷಗಳ ಕಾಲ ರಾಜಕೀಯವಾಗಿ ಬೆಳೆಯಲು ಕೈ ಹಿಡಿದ ಕಾರ್ಯಕರ್ತರನ್ನು ದೇಹದಲ್ಲಿ ಕೊನೆಯ ಉಸಿರು ಇರೋತನಕ ಬಿಡಲಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಮಾಡಿ ಕಾಂಗ್ರೆಸ್ ಪಕ್ಷದ ಪಂಚ್ ಗ್ಯಾರಂಟಿಗಳ ಯೋಜನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿ ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಎಂ ಟಿ ಬಿ ನಾಗರಾಜ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ ಡಾಕ್ಟರ್ ಕೆ ಸುಧಾಕರ್ ವಿರುದ್ಧ ಅಸಮಾಧಾನವನ್ನು ಹೊರ ಹಾಕಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.