ಸುದ್ದಿಮೂಲ ವಾರ್ತೆ
ಆನೇಕಲ್,ಜೂ.16:ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹುಲಿಮಂಗಳ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಸಂಸದ ಡಿ.ಕೆ ಸುರೇಶ್ ಉದ್ಘಾಟಿಸಿದರು.
ಒಂದು ಕೋಟಿ ಇಪ್ಪತ್ತು ಲಕ್ಷ ವೆಚ್ಚದ ಅತ್ಯಾಧುನಿಕ ಕಟ್ಟಡ ಇದಾಗಿದೆ. ಅಲ್ಲದೆ, 94 ಸಿ ಅಡಿಯಲ್ಲಿ ಹಕ್ಕು ಪತ್ರವನ್ನು ಫಲಾನುಭವಿಗಳಿಗೆ ವಿತರಣೆಯನ್ನು ಮಾಡಿದ್ದರು. ಇದರ ಪಕ್ಕದಲ್ಲಿ ಇದ್ದ ಪಂಚಾಯತಿ ಕಟ್ಟಡ ಶೀತಲ ವ್ಯವಸ್ಥೆಗೆ ತಲುಪಿದ ಹಿನ್ನೆಲೆಯಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಹುಲಿಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೈಯದ್ ಸಾಧಿಕ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಕಾರ್ಯದರ್ಶಿ ಕೃಷ್ಣಪ್ಪ ಸೇರಿದಂತೆ ಪಂಚಾಯತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.