ಸುದ್ದಿಮೂಲ ವಾರ್ತೆ
ಹೈದರಾಬಾದ್, ಮೇ 4: ಅಮೃತ ವರ್ಷಿಣಿ ಖ್ಯಾತಿಯ ಬಹುಭಾಷಾ ಹಿರಿಯ ನಟ ಶರತ್ ಬಾಬು ಅವರು ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ.
71 ವರ್ಷದ ಶರತ್ಬಾಬು ಅವರನ್ನು ಬಹುಅಂಗ ವೈಫಲ್ಯದ ಕಾರಣದಿಂದಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ವೆಂಟಿಲೇಟರ್ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಶರತ್ ಬಾಬು 1951ರ ಜುಲೈ 31ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತೆಲುಗಿನ ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಅಮೃತವರ್ಷಿಣಿ ಸಹಿತ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.