ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.11: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಜೊತೆಗೆ ಪೌರಕಾರ್ಮಿಕರ ಆದಾಯವನ್ನು ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.
ಮುನೀಶ್ ಮೌದ್ಗಿಲ್ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಗಿದ್ದರು. ಮುನೀಶ್ ಮೌದ್ಗಿಲ್ ಅವರು ಈ ಹಿಂದೆ ಸರ್ವೆ, ಸೆಟ್ಲ್ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವನ್ನು ಹೊಂದಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹುದ್ದೆ ಹೊಂದಿದ್ದರು.