ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಅ.18: ತಾಲ್ಲೂಕಿನ ಮೇಲೂರು ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಮೇಲ್ವಿಚಾರಕಿ ಎನ್.ಮಂಜುಳ ಭೇಟಿ ನೀಡಿದರು.
ಬಳಿಕ ಶಿಡ್ಲಘಟ್ಟ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಕುಂದು ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.
ಹಾಗೆಯೇ, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.