ಸುದ್ದಿಮೂಲ ವಾರ್ತೆ
ಕೊಪ್ಪಳ,ಸೆ.17: ಕೊಪ್ಪಳ ಜಿಲ್ಲೆ ಸೇರಿದಂತೆ ಸುತ್ತಲಿನ ವಿವಿಧ ಕೆಲವು ಜಿಲ್ಲೆಗಳನ್ನೊಳಗಂಡ ಈ ಕಲ್ಯಾಣ ಕರ್ನಾಟಕ ಪ್ರದೇಶವು ಶೈಕ್ಷಣಿಕ ಮತ್ತು ಔದ್ಯೋಗಿಕ ಸೇರಿದಂತೆ ಬೇರೆ ಬೇರೆ ರಂಗಗಳಲ್ಲಿ ದಿನೇದಿನೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೆಪ್ಟೆಂಬರ್ 17ರಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಜಂಟಿ ಕೃಷಿ ನಿರ್ದೇಶರಾದ ರುದ್ರೇಶಪ್ಪ ಟಿ.ಎಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರರಿದ್ದರು.