ಸುದ್ದಿಮೂಲ ವಾರ್ತೆ
ಮೈಸೂರು, ಜು. 23 : ರಾಜ್ಯ ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರ ಏರಿಸಿರುವುದನ್ನು ಖಂಡಿಸಿ ನಗರದಲ್ಲಿ ಭಾನುವಾರ ನಾನಾ ಸಂಘಟನೆಗಳ ಕಾರ್ಯಕರ್ತರು ನ್ಯಾಯಾಲಯದ ಮುಂಭಾಗ ಇರುವ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಕೆಟ್ಟ ಆಡಳಿತದ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕೂಡ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಬೆಲೆಗಳನ್ನು ಇಳಿಸಲಾಗುವುದು ಎಂದು ಹೇಳಿದ ಕಾಂಗ್ರೆಸ್ ಜನರಿಗೆ 5 ಗ್ಯಾರಂಟಿ ಭಾಗ್ಯಗಳನ್ನು ನೀಡುವ ಆಮಿಷವೊಡ್ಡಿ ನಂತರ ವಿದ್ಯುತ್ ಸೇರಿದಂತೆ ಎಲ್ಲಾ ಆಹಾರ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಖಂಡಿಸಿದರು.
ಗ್ಯಾರಂಡಿ ಯೋಜನೆಗಳಿಗೆ ಹಣ ಸಾಲುತ್ತಿಲ್ಲ ಎಂದು ಸಿಕ್ಕ ಸಿಕ್ಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಮೂಲಕ ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಪರ ಸಂಘಟನೆಯ ತೇಜಸ್ ಲೋಕೇಶ್ಗೌಡ, ಪ್ರಭುಶಂಕರ್, ಡಾ.ಶಾಂತರಾಜೇಅರಸ್, ಕ್ಥಷ್ಣಪ್ಪ, ಹನುಮಂತಯ್ಯ, ನಿತ್ಯಾನಂದ, ಬಸವರಾಜು, ರಾಧಾಕೃಷ್ಣ, ನಂದಕುಮಾರ್, ಗಣೇಶ್ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.