ಪಟಿಯಾಲ, ಏ.1: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು 10 ತಿಂಗಳ ಜೈಲು ವಾಸದ ಬಳಿಕ ಶನಿವಾರ ಬಿಡುಗಡೆಯಾಗಿದ್ದಾರೆ.
34 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ರಸ್ತೆ ಜಗಳ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪಂಜಾಬ್ನಪಟಿಯಾಲದಲ್ಲಿರುವ ಜೈಲಿನಿಂದ ಹೊರಬಂದ ಕೂಡಲೇ ಕೇಂದ್ರ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಭುತ್ವವು ಸಂಕೋಲೆಯಿಂದ ಬಿಗಿಯಲ್ಪಟ್ಟಿದೆ ಎಂದು ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ ಮತ್ತು ಈ ಬಾರಿ ಆ ಕ್ರಾಂತಿಯ ಹೆಸರು ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.