Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯಗೆ 1.90 ಕೋಟಿ ಮೌಲ್ಯದ ವಿದೇಶಿ ಸೋಫಾಸೆಟ್ ಉಡುಗೊರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.12: ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರೊಬ್ಬರು ವಿದೇಶಿ ಸೋಫಾ ಸೆಟ್‌ ನೀಡಿದ್ದಾರೆ. ಇದು 1.90 ಕೋಟಿ ರೂಪಾಯಿ ಬೆಲೆಬಾಳುವ ಉಡುಗೊರೆ ಎಂದು ಹೇಳಿದ್ದಾರೆ. ಅಲ್ಲದೆ, ಇದು ಇದು ಹ್ಯೂಬ್ಲೋಟ್‌ ವಾಚ್‌ನ ಮುಂದುವರೆದ ಭಾಗ ಎಂದು ಕಾಲೆಳೆದಿದ್ದಾರೆ.

ಮುಖ್ಯಮಂತ್ರಿ ಅವರ ಕಚೇರಿಗೆ ಒಂದು ಕಡೆ ಸರ್ಕಾರದಿಂದ ಖರ್ಚು ಮಾಡುತ್ತಿದ್ದು, ಮತ್ತೊಂದೆಡೆ ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಸೋಫಾ ಸೆಟ್ ನೀಡಿದ್ದಾರೆ ಎಂಬ ಮಾಹಿತಿ ಬಂದಿದೆ. ವಿದೇಶದಲ್ಲಿ ಸಿಗುವ ಸ್ಟಾಂಗ್ಲೆ ಅನ್ನೊ ವಿದೇಶಿ ಬ್ರಾಂಡ್ ಸೋಫಾ ಸೆಟ್‌ ಇದಾಗಿದ್ದು, 1 ಕೋಟಿ 90 ಲಕ್ಷ ರೂಪಾಯಿ ಬೆಲೆಬಾಳುತ್ತದೆ. ಇದನ್ನು ಯಾರೋ ಆಪ್ತ ಸಚಿವರೇ ಕೊಟ್ಟಿದ್ದಾರೆ ಎಂಬ ಮಾಹಿತಿಯೂ ಬಂದಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಮುಖ್ಯಮಂತ್ರಿ ಮನೆಯಲ್ಲಿ ಸಮ್ಮೇಳನ ಸಭಾಂಗಣ ನಿರ್ಮಾಣ ಮಾಡಿದ್ದಾರೆ. ಅದಕ್ಕೆ‌ ಎಷ್ಟು ಖರ್ಚು ಮಾಡಿದ್ದಾರೋ ಗೊತ್ತಿಲ್ಲ. ಅಲ್ಲಿಗೆ ಮಾಧ್ಯಮದವರನ್ನು ಒಳಗೆ ಬಿಟ್ಟಿದ್ದಾರೋ ಇಲ್ಲವೋ ಅದೂ ಸಹ ತಿಳಿದಿಲ್ಲ. ಮೂರು ಕೋಟಿ ರೂಪಾಯಿಗಿಂತಲೂ ಹೆಚ್ಚೋ ಏನೋ ಎಂಬುದು ತಿಳಿದಿಲ್ಲ. ಈ ಎಲ್ಲರದ ಬಗ್ಗೆ ಸತ್ಯ ಹರಿಶ್ಚಂದ್ರರೇ ಉತ್ತರ ಕೊಡಬೇಕು ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಕರ್ನಾಟಕದಲ್ಲಿ 5,71,665 ಕೋಟಿ ರೂಪಾಯಿ ಸಾಲ ಈಗ ಇದೆ. ಇನ್ನು 85,815 ಕೋಟಿ ರೂಪಾಯಿ ಸಾಲದ ಗುರಿ ಇಟ್ಟುಕೊಂಡಿದ್ದೀರಿ. ಸಾಲಕ್ಕೆ 56 ಕೋಟಿ ರೂಪಾಯಿ ಕಟ್ಟಬೇಕು. ಇದನ್ನು ನಿಮ್ಮ ಅಧಿಕಾರಿಗಳೇ ಹೇಳುತ್ತಿದ್ದಾರೆ. ಬರದಿಂದ ರಾಜ್ಯ ಅಸ್ತವ್ಯಸ್ತವಾಗಿದೆ. ಆದರೆ, ರಾಜ್ಯದಲ್ಲಿ ದುಡ್ಡಿಗೇನು ಬರ ಇಲ್ಲ, ಬ್ಲಾಕ್ ಮನಿಗೇನೂ ಕಡಿಮೆ ಇಲ್ಲ. ಒಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಸಿಕ್ಕಿದೆಯಲ್ಲವೇ? ಎಂದು ಕೆಣಕಿದರು.

ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಇವೆಲ್ಲಾ ಇಲ್ಲ. ಯಾರು ಹೈಕಮಾಂಡ್‌ಗೆ ಹೆಚ್ಚು ಹಣ ಕೊಡುತ್ತಾರೋ ಅವರು ಅಧಿಕಾರದಲ್ಲಿ ಇರುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಿಗೆ ಗುರಿ ನೀಡಿದೆ. ಯಾರು ಹೆಚ್ಚು ಹಣ ನೀಡುವರೋ ಅವರು ಅಧಿಕಾರದಲ್ಲಿ ಮುಂದುವರೆಯುತ್ತಾರೆ. ಹಣ ನೀಡದವರು ಸಚಿವರು ಆಗುವುದಿಲ್ಲ ಎಂದರು.

ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಸಿದ್ದರಾಮಯ್ಯ ಹೆಚ್ಚು ಹಣ ಕೊಡಬೇಕು. ಹಾಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳು ಹಣ ಕೊಟ್ಟರೆ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಅಷ್ಟೇ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ಧರಾಮಯ್ಯ ತೆಲಂಗಾಣಕ್ಕೆ ಹೋಗಿ ಭಾಷಣ ಮಾಡುತ್ತಾರೆ. ಇವರು ಡ್ಯೂಪ್ಲಿಕೇಟ್ ಸಿಎಂ ಎಂದು ಟೀಕಿಸಿದ ಅವರು, ಮೊದಲು ನಮ್ಮ ರಾಜ್ಯದ ಸಮಸ್ಯೆಯನ್ನು ಸರಿ ಮಾಡಪ್ಪ ಎಂದು ಸಿದ್ಧರಾಮಯ್ಯ ಅವರನ್ನು ಗುರಿಯಾಗಿಸಿ ಹೇಳಿದರು.

ಪಂಚರಾಜ್ಯಗಳಲ್ಲಿ ಸುಳ್ಳು ಗ್ಯಾರಂಟಿ ಪ್ರಚಾರ:

ಪಂಚರಾಜ್ಯಗಳ ಮತದಾರರಿಗೆ ಕಾಂಗ್ರೆಸ್ ಪಕ್ಷ ಸುಳ್ಳು ಗ್ಯಾರಂಟಿಗಳನ್ನು ಘೋಷಿಸುತ್ತದೆ. ಕರ್ನಾಟಕದಲ್ಲಿ ಸುಳ್ಳು ಗ್ಯಾರಂಟಿ ನೀಡಿ ಜನರಿಗೆ ಟೋಪಿ ಹಾಕಿದೆ. ಹಾಗಾಗಿ ಪಂಚ ರಾಜ್ಯಗಳ ಮತದಾರರು ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮರುಳಾಗಬಾರದು. ಕರ್ನಾಟಕ ಕಗ್ಗತ್ತಲಲ್ಲಿದೆ. ಗೃಹಜ್ಯೋತಿ ಫಲಾನುಭವಿಗಳಿಗೂ ವಿದ್ಯುತ್ ಬಿಲ್ ಬರುತ್ತಿದೆ. ಹೀಗಿರುವಾಗ ಡ್ಯೂಪ್ಲಿಕೇಟ್ ಸಿಎಂ ಸಿದ್ಧರಾಮಯ್ಯ ತೆಲಂಗಾಣದಲ್ಲಿ 24 ಗಂಟೆ ಉಚಿತ ಕರೆಂಟ್ ಕೊಡುತ್ತೇವೆ ಎಂದು ಭಾಷಣ ಹೊಡಿದ್ದಾರೆ ಎಂದು ಟೀಕಿಸಿದರು. ತೆಲಂಗಾಣದಲ್ಲಿ ಸಿದ್ಧರಾಮಯ್ಯ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಆಮೇಲೆ ತೆಲಂಗಾಣಕ್ಕೆ ಹೋಗಿ ಭಾಷಣ ಮಾಡಲಿ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂ ಮುಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಮುಂದೆ ವಿವರವಾಗಿ ಹೇಳುತ್ತೇನೆ ಎಂದು ಹೇಳಿ, ಸಮಾಜ ಕಲ್ಯಾಣ ಇಲಾಖೆಯ 10 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಕ್ಕೆ ಹಣ ಇಲ್ಲ ಎಂದರು. ಸಿದ್ಧರಾಮಯ್ಯ ರವರಿಗೆ ನನ್ನ ಹೆಸರು ಕೇಳಿದರೆ ಭಯ ಹಾಗಾಗಿ ಅವರು ತೆಲಂಗಾಣದಲ್ಲಿ ನರೇಂದ್ರಮೋದಿ ಅವರಿಗೆ ಚಾಲೆಂಜ್ ಮಾಡುತ್ತಾರೆ. ಸಾಲದಿಂದ ದೇಶ ದಿವಾಳಿಯಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಇವರು ಐದು ವರ್ಷ ಸಿಎಂ ಆಗಿದ್ದಾಗ 2 ಲಕ್ಷದ 45 ಸಾವಿರ ಕೋಟಿ ರೂ.ಗಳನ್ನು ಸಾಲ ಮಾಡಿದ್ದರು. ಇವರಿಗೆ ಯಾವ ನೈತಿಕತೆ ಇದೆ ಎಂದು ಹರಿಹಾಯ್ದರು. ಸರ್ಕಾರದ ಖಜಾನೆಯ ದುಡ್ಡೆಲ್ಲಾ ಆಯ್ದ ವ್ಯಕ್ತಿಗಳ ಮನೆಯಲ್ಲಿದೆ. ರಾಜ್ಯದಲ್ಲಿ ದುಡ್ಡು ಮಾಡಿ ದೇಶದಲ್ಲಿ ಎಲೆಕ್ಷನ್ ನಡೆಸುವುದು ಕಾಂಗ್ರಸ್ ನಾಯಕರ ಉದ್ದೇಶ ಎಂದು ಟೀಕಿಸಿದರು.

ತೆಲಂಗಾಣದಲ್ಲಿ ಚುನಾವಣಾ ಭಾಷಣ ಮಾಡಲು ಹೋಗಿ ಅಪಮಾನಕ್ಕೀಡಾಗಿ ಬಂದಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯ ಅಂಶಗಳಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ಎಂದು ಹೇಳಿದರು.

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರು ತೆಲಂಗಾಣದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ'' ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ