Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಗಳೂರು ನಗರದ ವಿವಿಧೆಡೆ 10 ಲಕ್ಷ ಜನ ಸೇರುವ ನಿರೀಕ್ಷೆ: ಗೃಹ ಸಚಿವ ಡಾ.ಜಿ. ಪರಮೇಶ್ವರ ಹೊಸ ವರ್ಷ ಸಂಭ್ರಮ: ಭದ್ರತೆಗೆ 20 ಸಾವಿರ ಪೊಲೀಸರು

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.28:
ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಗರದಲ್ಲಿ ಹೊಸ ಸಂಭ್ರಮಾಚರಣೆಯ ಕರ್ತವ್ಯಕ್ಕೆೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿಿದೆ. ಕಾನೂನು ಸುವ್ಯವಸ್ಥೆೆ 14 ಸಾವಿರ ಪೊಲೀಸರು, 2500 ಟ್ರಾಾಫಿಕ್ ಪೊಲೀಸರು, 88 ಕೆಎಸ್ಆರ್‌ಪಿ ಪ್ಲಟೂನ್ಸ್, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರ ವಾಹನಗಳನ್ನು ನಿಯೋಜಿಸಲಾಗುತ್ತಿಿದೆ. 400 ಟ್ರಾಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿಿದು. ಸಿವಿಲ್ ಡಿೆನ್ಸ್, ಹೋಮ್ ಗಾಡ್ಸರ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು.
ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿಿನ ಜನ ಭಾಗವಹಿಸುತ್ತಿಿದ್ದಾರೆ. ಕಳೆದ ವರ್ಷ 8 ಲಕ್ಷಕ್ಕು ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ.ರಸ್ತೆೆ, ಬ್ರಿಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾಾನಿಕ್ ಸಿಟಿಯ ನೀಲಾದ್ರಿಿ ರಸ್ತೆೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ.
ಹಿಂದಿನ ವರ್ಷದ ಅನುಭವದ ಮೇಲೆ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕು ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದರು.
ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿಕೊಡಲಾಗುವುದು. ರ್ಬಾ ಆ್ಯಂಡ್ ರೆಸ್ಟೋೋರೆಂಟ್, ಮೆಟ್ರೋೋ ಕಾರಿಡಾರ್, ಮನರಂಜನಾ ಸ್ಥಳಗಳಲ್ಲಿ ಹೆಚ್ಚಿಿನ ರೀತಿಯಲ್ಲಿ ಯುವಕ-ಯುವತಿಯರು ಸೇರುತ್ತಾಾರೆ. ಇದಕ್ಕೆೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ೆಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಿಸ್ ಕಂಟ್ರೋೋಲ್, ವಾಹನ ತಪಾಸಣೆ ವ್ಯವಸ್ಥೆೆ ಮಾಡಲಾಗಿದೆ. ಟ್ಯಾಾಕ್ಸಿಿಗಳು ಸಿಗುವುದಿಲ್ಲ ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆೆ ಮಾಡಲಾಗಿದೆ.
ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಾಾಲಿಕವಾಗಿ ಸಿಸಿ ಕ್ಯಾಾಮೆರಾಗಳನ್ನು ಅಳವಡಿಸಲಾಗಿದೆ. ಸೇಫ್ಟಿಿ ಶೆಲ್ಟರ್‌ಗಳು, ಆಂಬುಲೆನ್‌ಸ್‌‌ಗಳನ್ನು ನಿಯೋಜಿಸಲಾಗುತ್ತಿಿದೆ. ಜನದಟ್ಟಣೆಯ ಮೇಲೆ ಡ್ರೋೋನ್ ಕ್ಯಾಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ ಎಂದು ತಿಳಿಸಿದರು.
ಮಹಿಳಾ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆೆ ಹೆಚ್ಚಿಿನ ಗಮನ ಹರಿಸಲಾಗುವುದು. ಈಗಾಗಲೇ ಬಾರ್, ರೆಸ್ಟೋೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಡಿಜಿಪಿ ಅವರು 15 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ ಎಂದರು.
ಟೆರರಿಸ್ಟ್ ದೃಷ್ಟಿಿಯಿಂದಲೂ ಹೆಚ್ಚಿಿನ ಭದ್ರೆೆತೆಗೆ ಒತ್ತು ನೀಡಲಾಗಿದೆ. ಇದಕ್ಕೆೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಪೊಲೀಸರು ಹೆಚ್ಚಿಿನ ಮಾಹಿತಿ ಸಂಗ್ರಹಿಸಿ, ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗಮನ ಹರಿಸಲಾಗಿದೆ.
ಮುಖಚರ್ಯೆ ಗುರುತಿಸುವ ಎಐ ಕ್ಯಾಾಮೆರಾಗಳನ್ನು ಅಳವಡಿಸಲಾಗುತ್ತಿಿದೆ. ಅಪರಾಧ ಚಟುವಟಿಕೆ ಹಿನ್ನೆೆಲೆಯುಳ್ಳವರ ಮಾಹಿತಿ ೇಸ್ ರೆಕಾಗ್ನೈಸೇಷನ್ ಎಐ ಕ್ಯಾಾಮೆರಾದಿಂದ ಗೊತ್ತಾಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಅನುಕೂಲವಾಗುತ್ತದೆ.
ಕಳೆದ ಐದು ದಿನದಿಂದ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2854 ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.
ಹೀಟ್ ಮ್ಯಾಾಪ್:
ಆಂಬುಲೆನ್ಸ್, ವಾಹನಗಳು, ಟ್ರಾಾಫಿಕ್ ಸಮಸ್ಯೆೆ ಸೇರಿದಂತೆ ಜನಗಳಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಪರಿಚಯಿಸಲಾಗಿದೆ. ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು. ಇದೇ ಮೊದಲ ಬಾರಿಗೆ ’ಹೀಟ್ ಮ್ಯಾಾಪ್’ ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿಿನ ಜನ ಸೇರುತ್ತಿಿರುವುದನ್ನು ಸೂಚಿಸುತ್ತದೆ. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜನರ ದಟ್ಟಣೆ ನಿಯಂತ್ರಣಕ್ಕೆೆ ಕೂಡಲೇ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರಿಗೆ ಮನವಿ:
ಹೊಸ ವರ್ಷವನ್ನು ಜವಾಬ್ದಾಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿಿದೆ. ನಿಮ್ಮ ಮನೆಯ ಯುವಕರು, ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆೆ ನಿಗಾವಹಿಸಬೇಕು ಎಂದು ಗೃಹ ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ