Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ಕಾರ್ಮಿಕರು ಸಜೀವ ದಹನ

ಸುದ್ದಿಮೂಲ ವಾರ್ತೆ

ಅತ್ತಿಬೆಲೆ, ಅ.07: ಪಟಾಕಿ ಗೋಧಾಮಿಗೆ ಬೆಂಕಿ ತಗುಲಿ 12 ಮಂದಿ ಸಜೀವ ದಹನಗೊಂಡಿರುವ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಅತ್ತಿಬೆಲೆ ಗಡಿಯ ಹೆದ್ದಾರಿ ಸಮೀಪದ ಬಾಲಾಜಿ ಕ್ರ್ಯಾಕರ್ಸ್‌ನಲ್ಲಿ ಅನ್‌ ಲೋಡ್‌ ಮಾಡುವ ಸಂದರ್ಭಈ ದುರಂತ ನಡೆದಿದೆ. ಸ್ಥಳೀಯರ ಮಾಹಿತಿ ಪ್ರಕಾರ ಅಂಗಡಿಯೊಳಗೆ 20 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾಲೀಕ ನವೀನ್‌ ಸೇರಿದಂತೆ ನಾಲ್ವರು ಮಾತ್ರ ಹೊರಬಂದಿದ್ದಾರೆ. ಇನ್ನೂ ಹಲವು ಮಂದಿ ಒಳಗೆ ಸಿಲುಕಿ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಶನಿವಾರ ಮಧ್ಯಾಹ್ನ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಮೂವರು ಗಂಭೀರವಾಗಿ ಗಾಯಗೊಂಡು, ಹಲವರು ನಾಪತ್ತೆಯಾಗಿದ್ದರು. ಆದರೆ, ರಾತ್ರಿವೇಳೆಗೆ ನಾಪತ್ತೆಯಾಗಿದ್ದವರ ಪೈಕಿ 12 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.

ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಮಧ್ಯಾಹ್ನ 3.30 ರ ವೇಳೆಗೆ ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್‌ಗಳನ್ನು ತಂದು ಲಾರಿಯಿಂದ ಅನ್‌ಲೋಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ.

ಗೋಧಾಮಿನಿಂದ ಸುಟ್ಟುಕರಕಲಾಗಿದ್ದ ಹತ್ತು ದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿದ್ದು, ಬೆಂಕಿ ಸಂಪೂರ್ಣವಾಗಿ ಶಮನಗೊಂಡ ಬಳಿಕ ಒಳಗೆ ಹೋಗಿ ಪರಿಶೀಲನೆ ಮಾಡಲಾಗುವುದು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ತಿಳಿಸಿದ್ದಾರೆ.

ಮಳಿಗೆ ಪಕ್ಕದಲ್ಲಿಯೇ ಇದ್ದ ಗೋದಾಮಿಗೂ ಬೆಂಕಿ ತಗುಲಿದೆ. ಅಕ್ಕ-ಪಕ್ಕದಲ್ಲಿದ್ದ ನಾಲ್ಕೈದು ಅಂಗಡಿಗಳು, ಒಂದು ಕ್ಯಾಂಟರ್ ಸೇರಿದಂತೆ ನಾಲ್ಕೈದು ವಾಹನಗಳು ಸುಟ್ಟು ಭಸ್ಮವಾಗಿವೆ. ಹೆದ್ದಾರಿ ಪಕ್ಕದಲ್ಲಿಯೇ ಪಟಾಕಿ ಮಳಿಗೆ ಇರುವುದರಿಂದ ನೂರಾರು ಜನರು ಜಮಾಯಿಸಿದ್ದರು. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅತ್ತಿಬೆಲೆಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ