Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಡಿಎಲ್‌ನಿಂದ ಸರ್ಕಾರಕ್ಕೆೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಾಂತ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.24:
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ.ಗಳನ್ನು ಸರ್ಕಾರಕ್ಕೆೆ ಹಸ್ತಾಾಂತರಿಸಿತು.
ಸಂಸ್ಥೆೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ನೀಡಿದರು.
ಸಚಿವ ಎಂ.ಬಿ.ಪಾಟೀಲ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, ರೂ 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆೆಯ ವತಿಯಿಂದ ಸರಕಾರಕ್ಕೆೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಾಂತರಿಸಲಾಗಿತ್ತು. ಇದಕ್ಕೆೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆೆಯ ವ್ಯವಸ್ಥಾಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ