Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುತ್ವ ಅವಹೇಳನ: ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.21:  ಹಿಂದುತ್ವದ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹಿಂದುತ್ವದ ಕುರಿತಂತೆ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವರು ಅವರ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಸದಾಶಿವನಗರ ಪೊಲೀಸರು ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯದ ಮುಂದೆ ಚೇತನ್ ಅವರನ್ನು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದ ನಟ ಚೇತನ್ ಅದರಲ್ಲಿ 'ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ