Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

15,000 ಕೋಟಿ ರೂ. ವಿದ್ಯುತ್ ಯೋಜನೆಗಳ ಒಪ್ಪಂದಕ್ಕೆ ಸಹಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.9: ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುವ ಸಂಬಂಧ ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ ಜತೆ ರಾಜ್ಯ ಸರ್ಕಾರ ಸಹಿ ಹಾಕಿದೆ.

ಇಂಧನ ಸಚಿವ ಕೆ ಜೆ ಜಾರ್ಜ್ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಪರವಾಗಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್‌ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಗಳನ್ನು ಪರಿಹರಿಸಲು ಈ ಒಪ್ಪಂದ ಪೂರಕವಾಗಿದ್ದು, ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಬದ್ಧ ಎಂದು ಇಂಧನ ಸಚಿವರು ತಿಳಿಸಿದರು.

ದಿಲ್ಲಿಯಲ್ಲಿ ಈ ಹಿಂದೆ ಕೇಂದ್ರ ಇಂಧನ ಸಚಿವ ಆರ್‌ಕೆ ಸಿಂಗ್ ಮತ್ತು ಟಿಹೆಚ್‌ಡಿಸಿಎಲ್‌ನ ಸಿಎಂಡಿ ಆರ್.ಕೆ. ವಿಷ್ಣೋಯ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಒಪ್ಪಂದ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿತ್ತು. ಅದರ ಫಲವಾಗಿ ನಾವು ಇಂದು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಒಪ್ಪಂದದಂತೆ ಆದ್ಯತೆ ಮೇರೆಗೆ ಕರ್ನಾಟಕಕ್ಕೆ ವಿದ್ಯುತ್‌ ಒದಗಿಸುವುದಾಗಿ ಟಿಹೆಚ್‌ಡಿಸಿಎಲ್‌ ಭರವಸೆ ನೀಡಿದೆ ಎಂದರು.

"ಕದ್ರಾ ಅಣೆಕಟ್ಟು ಜಲಾಶಯದಲ್ಲಿ 100 ಮೆಗಾವ್ಯಾಟ್‌ ಸಾಮರ್ಥ್ಯದ ಫ್ಲೋಟಿಂಗ್‌ ಸೋಲಾರ್ ಪಿವಿ ಸ್ಥಾವರದ ಅಭಿವೃದ್ಧಿ, 170 ಮೆಗಾವ್ಯಾಟ್ ಸಾಮರ್ಥ್ಯದ ಗ್ರೌಂಡ್‌ ಮೌಂಟೆಡ್‌ ಯೋಜನೆ, ಕೆಪಿಸಿಎಲ್ ಆವರಣದಲ್ಲಿ ಮೇಲ್ಛಾವಣಿ ಸೌರ ಪಿವಿ ಸ್ಥಾವರ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್‌ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ಸ್ಥಾಪನೆ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ", ಎಂದು ಸಚಿವರು ವಿವರಿಸಿದರು.

ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ , ಟಿಹೆಚ್‌ಡಿಸಿಎಲ್‌ ಮುಖ್ಯ ವ್ಯವಸ್ಥಾಪಕ ಸಂದೀಪ್ ಸಿಂಘಾಲ್, ಟಿಹೆಚ್‌ಡಿಸಿಎಲ್‌ ಸಹಾಯಕ ಮುಖ್ಯ ವ್ಯವಸ್ಥಾಪಕ ಮಲ್ಲಿಕಾರ್ಜುನ ಉದಯಗಿರಿ, ಟಿಹೆಚ್‌ಡಿಸಿಎಲ್‌ನ ವಿಶೇಷ ಅಧಿಕಾರಿ, ಗುಜರಾತ್ ಸರ್ಕಾರದ ಮಾಜಿ ವಿಶೇಷ ಆಯುಕ್ತ ಎಕೆ ವಿಜಯ್ ಕುಮಾರ್ ಮತ್ತು ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ್ ಸೋಲಾರ್ ಪಾರ್ಕ್‌

1 ಗಿ.ವ್ಯಾ. ಹೈಬ್ರಿಡ್ ಯೋಜನೆ ಮತ್ತು 500 ಮೆಗಾ ವ್ಯಾಟ್‌ ಸಾಮರ್ಥ್ಯದ ಬೀದರ್ ಸೋಲಾರ್ ಪಾರ್ಕ್‌ ಅಭಿವೃದ್ಧಿ ಸಂಬಂಧ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ಜತೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ. ಟಿಹೆಚ್‌ಡಿಸಿಎಲ್‌ನ ತಾಂತ್ರಿಕ ನಿರ್ದೇಶಕ ಭೂಪೇಂದರ್ ಗುಪ್ತಾ ಹಾಗೂ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಅವರು ಒಪ್ಪಂದ ಪತ್ರ ವಿನಿಮಯ ಮಾಡಿಕೊಂಡರು. ಅದರಂತೆ ಟಿಹೆಚ್‌ಡಿಸಿಎಲ್‌ ಕೈಗೊಳ್ಳುವ ನವೀಕರಿಸಬಹುದಾದದ ಇಂಧನ ಯೋಜನೆಗಳಿಗೆ ನವೀಕರೀಸಬಹುದಾದದ ಇಂಧನ ನೀತಿ 2022-27ರ ಅನ್ವಯ ಕ್ರೆಡಲ್‌ ನೆರವು ಒದಗಿಸಲಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ