Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋೋತ್ಸವಕ್ಕೆ ಚಾಲನೆ ಮನರಂಜನೆ ಜೊತೆಗೆ ಸಮಾಜವನ್ನು ಸಿನಿಮಾಗಳು ತಿದ್ದಬೇಕು: ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.29:
ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಭವ್ಯ ಮೆಟ್ಟಿಿಲುಗಳ ಮೇಲೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋೋತ್ಸವವನ್ನು ಉದ್ಘಾಾಟಿಸಿ ಮಾತನಾಡಿದರು.
ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ ಜವಾಬ್ದಾಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು.
ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವ ನೆರವಾಗಲಿ. ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮ ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆೆ ಚಲನಚಿತ್ರ ಮಾಧ್ಯಮ ನೆರವಾಗಬೇಕು ಎಂದರು.
ಇತರೆ ದೇಶಗಳಲ್ಲಿ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮ ಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ನೆರವಾಗುತ್ತದೆ. ಸಮಾಜಮುಖಿ ಸಿನಿಮಾ ಮಾಡುವವರಿಗೆ ಚಿತ್ರೋೋದ್ಯಮದ ಅಭಿವೃದ್ಧಿಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದರು.
ಪ್ರಕಾಶ್ ರಾಜ್ ಸಿನಿಮಾಗೆ ಸೀಮಿತವಾಗಿಲ್ಲ
ಚಿತ್ರೋೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ ಪರವಾಗಿ ಹೋರಾಡುತ್ತಿಿದ್ದಾರೆ. ಇವರ ಈ ಸಾಮಾಜಿಕ ಬದ್ದತೆ ಅಭಿನಂದನೀಯ ಎಂದರು.
ಶಾಸಕ ರಿಜ್ವಾಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಸಭಾಪತಿ ಬಸವರಾಜ ಹೊರಟ್ಟಿಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಚಿತ್ರೋೋತ್ಸವದ ಕಲಾತ್ಮಕ ನಿರ್ದೇಶಕ ಮುರಳಿ, ಮುಖ್ಯಮಂತ್ರಿಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಚಿತ್ರೋೋತ್ಸವದ ರಾಯಭಾರಿ ಪ್ರಕಾಶ್ ರಾಜ್, ಖ್ಯಾಾತ ನಟಿ ರುಕ್ಮಿಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು, ವಿಧಾನ ಪರಿಷತ್ ಸದಸ್ಯೆೆ ನಟಿ ಉಮಾಶ್ರೀ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ