Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲು ನ.17ರ ಗಡುವು


ಸುದ್ದಿಮೂಲ ವಾರ್ತೆ





ಬೆಂಗಳೂರು, ಅ.24: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ನೋಂದಣಿ ಸಂಖ್ಯೆ (ಎಚ್‌ಎಸ್‌ಆರ್‌ಪಿ) ಅಳವಡಿಕೆ ನೀಡಲಾಗಿದ್ದ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ಹಿನ್ನೆಲೆಯಲ್ಲಿ ಗಡುವು ವಿಸ್ತರಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ನೋಂದಣಿಯಾಗಿರುವ 2 ಕೋಟಿ ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ 10ಕ್ಕಿಂತ ಕಡಿಮೆ) ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್‌ ಅಳವಡಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭದ್ರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮತ್ತು ವಾಹನಗಳ ದುರುಪಯೋಗ ತಡೆಯಲು ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದರೆ ನಂತರ ತೆಗೆಯಲು ಸಾಧ್ಯವಾಗುವುದಿಲ್ಲ.

ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಸಾಧ್ಯವಾಗುವುದಿಲ್ಲ. ಏಪ್ರಿಲ್ 1, 2019 ಕ್ಕೂ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಈ ನಂತರ ನೋಂದಣಿಯಾದ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ.

ನೀರಸ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರಕ್ಕೆ ಸಾರಿಗೆ ಇಲಾಖೆ ಒತ್ತು ನೀಡಿದೆ. ಆದರೆ, ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಏಕೆಂದರೆ, ಮೂಲ ಸಲಕರಣೆ ತಯಾರಕರಿಂದ ಮಾನ್ಯತೆ ಪಡೆದಿರುವ ಎಚ್ಎಸ್ಆರ್‌ಪಿ ತಯಾರಕರಿಗೆ ಮಾತ್ರ ನಂಬರ್ ಪ್ಲೇಟ್ ಅಳವಡಿಕೆಗೆ ಅನುಮತಿ ನೀಡಿರುವುದರ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಗಡುವು ಕೊನೆಗೊಳ್ಳುಲು ಒಂದು ತಿಂಗಳಿಗಿಂತ ಕಡಿಮೆ ಅವಧಿಯಿದ್ದು, ಸರ್ಕಾರವು ಮತ್ತೆ ಗಡುವನ್ನು ವಿಸ್ತರಿಸುವ ಸಾಧ್ಯತೆ ಇದೆ.





Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ