Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.55 ಕೋಟಿ ಪಂಗನಾಮ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.22: ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರ ವಿರುದ್ಧದ ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ ಎಂಜಿನಿಯರ್‌ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಶಿವಮೂರ್ತಿ ಎಂಬುವವರಿಗೆ ನಾಲ್ವರ ತಂಡವು ವಂಚಿಸಿದೆ.

2.55 ಕೋಟಿ ರೂ. ಪಂಗನಾಮ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಮೂರ್ತಿ, ಪಕ್ಷದ ಚಟುವಟಿಕೆಗಾಗಿ 65 ಲಕ್ಷ ರೂಪಾಯಿ ಖರ್ಚು ಮಾಡಿಸಿದ್ದು, ಟಿಕೆಟ್‌ ಕೊಡಿಸುವುದಾಗಿ ವಂಚಕರು ತಮ್ಮ ಬಳಿ ಒಟ್ಟು 1.90 ಕೋಟಿ ರೂಪಾಯಿಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಒಟ್ಟು 2.55 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ದೂರಿದರು. ಈ ಪ್ರಕರಣ ಸಂಬಂಧ ಅಕ್ಟೋಬರ್‌ 19ರಂದು ಶಿವಮೂರ್ತಿ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

ಟಿಕೆಟ್ ಸಿಗದಿದ್ದಾಗ ಹಣ ವಾಪಸ್ ಕೇಳಿದೆ. ಅದಕ್ಕೆ 90 ಲಕ್ಷ ರೂಪಾಯಿ ಚೆಕ್ ನೀಡಿದ್ದರು. ಅ.10ರ ದಿನಾಂಕವನ್ನು ಹಾಕಲಾಗಿತ್ತು. ಆದರೆ, ಚೆಕ್‌ ಬೌನ್ಸ್‌ ಆಗಿದೆ ಎಂದು ಶಿವಮೂರ್ತಿ ಆರೋಪಿಸಿದ್ದಾರೆ.

ಕೊಟ್ಟೂರಿನ ಕಟಾರಿ ಆಪ್ಟಿಕಲ್ ಮಾಲೀಕ ಮೋಹನ್ ಕಟಾರಿಯಾ, ಬಿಜೆಪಿ ಮಾಜಿ ಮುಖಂಡ, ಹಾಲಿ ಜನಾರ್ದನ ರೆಡ್ಡಿ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಹಾಗೂ ಪುತ್ತೂರು ಮೂಲದ ಶೇಖರ್ ಪುರುಷೋತ್ತಮ್ ನಿರ್ಲಕಟ್ಟೆ (ರಾಜಶೇಖರ್) ಎಂಬುವವರಿಂದ ವಂಚನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಒಟ್ಟು 1.90 ಕೋಟಿ ರೂಪಾಯಿಯನ್ನು ಇದುವರೆಗೆ ಪಡೆಯಾಗಿದೆ. ಅದರಲ್ಲಿ 65 ಲಕ್ಷ ರೂಪಾಯಿಯನ್ನು ಪಕ್ಷದ ಬೇರೆ ಬೇರೆ ವಿಚಾರಕ್ಕೆ ಖರ್ಚು ಮಾಡಿಸಲಾಗಿದೆ ಎಂದು ಆರೋಪ ಮಾಡಿರುವ ಶಿವಮೂರ್ತಿ, ತಾವು ಕೊಟ್ಟಿರುವ ಎಲ್ಲ ಹಣದ ದಾಖಲೆ ಸಮೇತ ದೂರು ನೀಡಿದ್ದಾರೆ. ಅಲ್ಲದೆ, ಈಗ ಹಣವನ್ನು ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ ಎಂದು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಿಎಂ, ಗೃಹ ಸಚಿವರಿಗೆ ಪತ್ರ:

ಹಣ ಕಳೆದುಕೊಂಡ ಶಿವಮೂರ್ತಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ಪತ್ರ ಬರೆದು ಮನವಿ ಮಾಡಿದ್ದರು. ತಮಗೆ ವಂಚನೆ ಮಾಡಿದವರ ಬಗ್ಗೆ ಸಂಪೂರ್ಣ ವಿವರವನ್ನು ಹಾಕಿ, ಮೋಸ ಮಾಡಿದವರ ಮೇಲೆ ಕ್ರಮ ಕೈಗೊಂಡು ತಮ್ಮ ಹಣವನ್ನು ವಾಪಸ್‌ ಕೊಡಿಸುವಂತೆ ಕೋರಿದ್ದಾರೆ. ಈ ವಂಚಕರು ತಮಗೆ 2022ರ ಅಕ್ಟೋಬರ್ 23ಕ್ಕೆ ಪುತ್ತೂರು ಬಿಜೆಪಿ ಮುಖಂಡ ಶೇಖರ್‌ಗೆ ಪರಿಚಯ ಮಾಡಿಸಿದೆ.

ಬಳಿಕ ನಳಿನ್ ಕುಮಾರ್ ಕಟೀಲ್ ಅವರನ್ನು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿಸಿತ್ತು. ನಳಿನ್ ಕುಮಾರ್ ಕಟೀಲ್ ಕೂಡಾ ಟಿಕೆಟ್ ವಿಚಾರ ಪುತ್ತೂರು ಬಿಜೆಪಿ ಮುಖಂಡ ಶೇಖರ್ ಎನ್.ಪಿ ಬಳಿಯೇ ಮಾತನಾಡಿ ಎಂದು ಹೇಳಿದ್ದರು ಎಂದು ಶಿವಮೂರ್ತಿ ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ