Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೀಪಾವಳಿಗೆ 2000 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ನ.04: ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನ. 10 ರಿಂದ 12 ರವರೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ 2 ಸಾವಿರ ಹೆಚ್ಚುವರಿ ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ.

ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. ಈ ಸಂಬಂಧ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ. 14 ಹಾಗೂ 15 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಅಲ್ಲದೆ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹಾಗೂ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಸಹ ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವುದು.

ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ