ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ
ಸುದ್ದಿಮೂಲ ವಾರ್ತೆ
ಮೈಸೂರು, ಜು 6 : ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಮೈಸೂರಿನ ರೈಲ್ವೆ ನಿಲ್ದಾಣದ ಬಾಬು ಜಗಜೀವನ್ ರಾಮ್ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
ಮೇಯರ್ ಶಿವಕುಮಾರ್ , ಉಪ ಮೇಯರ್ ಡಾ.ಜಿ. ರೂಪ, ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ ಕೃಷ್ಣ, ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಜಿಪಂ ಸಿಇಓ ಕೆ.ಎಂ. ಗಾಯತ್ರಿ, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನತ್, ಹಾಗೂ ನಾನಾ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.