Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯ ಚಿನ್ನ ವಶ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 18 : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಧ್ಯಪ್ರದೇಶದ ಇಂದೋರ್ ನಿಂದ ಇಂಡಿಗೋ ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿನ್ನವನ್ನು ಅಕ್ರಮ‌ ಸಾಗಾಟ ಮಾಡುವ ಆಸಾಮಿಗಳು ಮೊದಲೇ ವಿಮಾನದ ಸೀಟ್ ನ ಕೆಳಗೆ ಚಿನ್ನವನ್ನು ಬಚ್ಚಿಟ್ಟಿದ್ದರು. ಬಂಧಿತ ವ್ಯಕ್ತಿಯೂ ಅದೇ ವಿಮಾನದಲ್ಲಿ ಸೀಟ್ ಬುಕ್ ಮಾಡಿದ್ದು, ದೇವನಹಳ್ಳಿಗೆ ವಿಮಾನ ಬಂದಿಳಿಯುವಾಗ ಅಲ್ಲಿದ್ದ‌ ಚಿನ್ನವನ್ನು ಹೊರತೆಗೆದು ನಿಲ್ದಾಣಕ್ಕೆ ಬಂದಿಳಿದಿದ್ದಾನೆ.

ಸಾಮಾನ್ಯವಾಗಿ ದೇಶೀಯ ವಿಮಾನ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುವುದಿಲ್ಲ ಎಂಬ ಧೈರ್ಯದಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಲು ಯತ್ನಿಸಿದ್ದು, ವಿಮಾನ ನಿಲ್ದಾಣದಲ್ಲಿ ಆರೋಪಿತನ ಹವಾಭಾವದಿಂದ ಅನುಮಾನಿತಗೊಂಡು ಅಧಿಕಾರಿಗಳ ಕೈಗೆ ಸಿಕ್ಕಿ ಬಿದಿದ್ದಾನೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ