Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವತ್ರಿಕ ಮೂಲ ಆದಾಯದ ಕಲ್ಪನೆಯಲ್ಲಿ 5 ಗ್ಯಾರಂಟಿಗಳು : ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಹಾಸನ ನ. 07:ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ ಸಾಧ್ಯ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಹಾಸನದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿನಿಲಯ ಮತ್ತು ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಎಂದರು.

ಸಾಮಾಜಿಕ, ಆರ್ಥಿಕ ಅಸಮಾನತೆ ತೊಡೆದು ಹಾಕಿದಾಗ ಮಾತ್ರ ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಸಾಧ್ಯ. ಕಾಂಗ್ರೆಸ್ ಸರ್ಕಾರ ಸಮಾಜದ ಅಸಮಾನತೆ ಅಳಿಸಿ ಎಲ್ಲ ವರ್ಗದವರೂ ಮುಖ್ಯವಾಹಿನಿಗೆ ಬರುವ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾದಿ ದಲಿತರು, ಹಿಂದುಳಿದ ವರ್ಗದವರು ಮತ್ತು ಎಲ್ಲಾ ಜಾತಿಯ ಬಡವರಿಗೂ ಶಕ್ತಿ ತುಂಬುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಒಂದು ಕೋಟಿ ವರೆಗಿನ ಕಾಮಗಾರಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ. ಜತೆಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅಶಕ್ತರಿಗೆ ಆರ್ಥಿಕ ಶಕ್ತಿ ತುಂಬುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆಯೂ ಬೆಳವಣಿಗೆಯಾಗುತ್ತಿದೆ ಎಂದರು.

ಹಾಸನದ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಶಿವಲಿಂಗೇಗೌಡರು, ಸ್ವರೂಪ್ ಪ್ರಕಾಶ್, ಮಾಜಿ ಸಚಿವ ಬಿ.ಶಿವರಾಂ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಶೆಟ್ಟರು, ಉಪಾಧ್ಯಕ್ಷದ ಲಕ್ಷ್ಮಣ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ