Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ಸಾವಿರ ಮಂದಿ ಭಾಗಿ

ಸುದ್ದಿಮೂಲ ವಾರ್ತೆ

ಮೈಸೂರು, ಅ.4 : ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ತಡೆಯುವ ನಿಟ್ಟಿನಲ್ಲಿ ಅ. 13 ರಂದು ಚಾಮುಂಡಿ ಬೆಟ್ಟ ಚಲೋ ಜಾಥಾ ಹಮ್ಮಿಕೊಂಡಿದ್ದು, 5 ಸಾವಿರ ಮಂದಿ ಭಾಗವಹಿಸವರು ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ಪಾದ ಹಾಗೂ ವಿಶ್ವವಿದ್ಯಾಲಯದ ಆವರಣದಿಂದ ಜನ ಚಾಮುಂಡಿಬೆಟ್ಟಕ್ಕೆ ತೆರಳಿ,ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಹಾಗು ಸಿಟಿ ಪೊಲೀಸ್ ಕಮಿಷನರ್‌ ಬಳಿ ತೆರಳಿ ಮಹಿಷ ದಸರಾಗೆ ಅನುಮತಿ ನೀಡದಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಟಿಪ್ಪು ಹೈದರಾಲಿ ಕಾಲ ಬಿಟ್ರೆ 414 ವರ್ಷದಿಂದ ನಿರಂತರವಾಗಿ ಮೈಸೂರು ದಸರಾ ನಡೆದುಕೊಂಡು ಬರುತ್ತಿದೆ . ಮೈಸೂರು ಜನರಿಗೆ ದಸರಾ ಅಂದ್ರೆ ಏನು, ನವರಾತ್ರಿ ಅಂದ್ರೆ ಏನು ಅಂತ ಗೊತ್ತು. 2015ರಲ್ಲಿ ಮಹಿಷ ದಸರಾ ಎನ್ನುವ ಅಸಹ್ಯ ಹುಟ್ಟುಹಾಕಿದ್ದಾರೆ ಎಂದು ಟೀಕಿಸಿದರು.

ಅಂದು, ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಎಂದು ಮೆರವಣಿಗೆ ಮಾಡಲಾಯಿತು. ಆಗಿನ ಸಿದ್ದರಾಮಯ್ಯ ಸರ್ಕಾರ ಅದನ್ನು ನಿಲ್ಲಿಸಲಿಲ್ಲ. ಇಲ್ಲಿ ಭಕ್ತರ ಭಾವನೆಗೆ ನೋವಾಗುವುದನ್ನು ನಿಲ್ಲಿಸುವಂತೆ ಕೋರಿದ ಮನವಿಗೆ ಅಂದಿನ ಸಚಿವ ಸೋಮಣ್ಣ ಸ್ಪಂದಿಸಿದ್ದರು. ಬಳಿಕ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಇಂತಹ ಅಸಹ್ಯವನ್ನು ಮಟ್ಟ ಹಾಕುವ ಕೆಲಸ ಆಗಿತ್ತು. ಈಗ ಮತ್ತೆ ಶುರುವಾಗಿದೆ ಇದನ್ನು ನಿಲ್ಲಿಸುವಂತೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ