Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5000 ಕೋಟಿ ರೂ. ಹೂಡಿಕೆ

ಸುದ್ದಿಮೂಲ ವಾರ್ತೆ

ಚೆನ್ನೈ, ಆ.2: ಕರ್ನಾಟಕದಲ್ಲಿ 5000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್‌ ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ಚೆನ್ನೈನ ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.

ಈ ವಿಷಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಬುಧವಾರ ಅಧಿಕೃತವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಚೆನ್ನೈನಲ್ಲಿ ತಮ್ಮ ಜತೆಗೆ ಐಟಿ ಬಿಟಿ, ಸಚಿವ ಪ್ರಿಯಾಂಕ್ ಖರ್ಗೆ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತು ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಸಚಿವ ಎಂ.ಬಿ. ಪಾಟೀಲ, ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ಮೊತ್ತದ ಆ್ಯಪಲ್ ಫೋನ್ ತಯಾರಿಕಾ ಘಟಕ ಹೊರತಾದವು. ಇದಕ್ಕೂ ದೊಡ್ಡಬಳ್ಳಾಪುರ ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

“ಫಾಕ್ಸ್‌ಕಾನ್ ಮತ್ತು ಕರ್ನಾಟಕ ಸರ್ಕಾರದ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ ಮತ್ತು ರಾಜ್ಯದ ಒಟ್ಟಾರೆ ಸಾಮಾಜಿಕ- ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಮುಖ್ಯವಾಗಿ ಸಾವಿರಾರು ನುರಿತ ಕೆಲಸಗಾರರಿಗೆ ಉದ್ಯೋಗ ದೊರೆಯುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಲಿರುವ ಫಾಕ್ಸ್‌ಕಾನ್‌ಗೆ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧ” ಎಂದರು.

"ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್‌ಕಾನ್‌ ಮುಂದೆ ಬಂದಿರುವುದು ಸಂತೋಷದ ವಿಷಯ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದು ಹೇಳಿದ್ದಾರೆ.

"ಕರ್ನಾಟಕ ಸರ್ಕಾರದ ಜತೆ ಯೋಜಿತ ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ನಮ್ಮ ಹೈಟೆಕ್ ಉದ್ಯಮಗಳಿಗೆ ರಾಜ್ಯ ಆಕರ್ಷಕ ತಾಣವಾಗಿದೆ. ಉದ್ಯಮಕ್ಕೆ ಪೂರಕವಾದ ವಾತಾವರಣವಿದ್ದು, ನುರಿತ ಕೆಲಸಗಾರರ ಲಭ್ಯತೆ ಇಲ್ಲಿನ ವಿಶೇಷ. ಈ 2 ಪ್ರಮುಖ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ" ಎಂದು ಫಾಕ್ಸ್‌ಕಾನ್‌ನ ಅಧ್ಯಕ್ಷ ಯಂಗ್ ಲಿಯು ಹೇಳಿದ್ದಾರೆ.

ಪ್ರಮುಖ ಯೋಜನೆಗಳ ವಿವರ:

ಫೋನ್ ಎನ್‌ಕ್ಲೋಸರ್‌- FII: ಐಫೋನ್‌ಗಳ ಮೆಕ್ಯಾನಿಕಲ್ ಎನ್‌ಕ್ಲೋಸರ್‌ನಂತಹ ಸ್ಮಾರ್ಟ್‌ಫೋನ್‌ನ ಉಪ ಘಟಕಗಳನ್ನು ತಯಾರಿಸುವ ಸಂಸ್ಥೆಯಾದ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ ನೆಟ್ (FII)ನ ಹೂಡಿಕೆ ಮೊತ್ತ 350 ದಶಲಕ್ಷ ಡಾಲರ್ (3,000 ಕೋಟಿ ರೂ.) ಯೋಜನೆಯಡಿ 12,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಎಫ್‌ಐಐ ಉದ್ದೇಶಿಸಿದೆ.

ಸೆಮಿಕಾನ್ ಉಪಕರಣಗಳು- ಅಪ್ಲೈಡ್‌ ಮೆಟೀರಿಯಲ್ಸ್‌ ಸಹಯೋಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳ ತಯಾರಿಸುವ ಸಂಸ್ಥೆಯ ಯೋಜಿತ ಯೋಜನೆಯ ಹೂಡಿಕೆ ಮೊತ್ತ 250 ದಶಲಕ್ಷ ಡಾಲರ್ (2,000 ಕೋಟಿ ರೂ.). ಇದರಿಂದ 1000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಹೈಟೆಕ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ - 2 ನೇ ಹಂತದಲ್ಲಿ ಈ ಯೋಜನೆಗಾಗಿ 35 ಎಕರೆ ಭೂಮಿಯನ್ನು ಅಂತಿಮಗೊಳಿಸಲಾಗಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ