Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀತಿ ಸಂಹಿತೆ ಉಲ್ಲಂಘನೆ; 51 ಪ್ರಕರಣ ದಾಖಲು

ಸುದ್ದಿಮೂಲ ವಾರ್ತೆ,
ಬಳ್ಳಾರಿ ಏ ೦೪ :ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ ನಗದು ಸೇರಿದಂತೆ ಚಿನ್ನಾಭರಣ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಾದ್ಯಂತ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದು, ಚಿನ್ನಾಭರಣ ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಸಂಜೆ ರೂಪನಗುಡಿ ಚೆಕ್‌ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ಆಂಧ್ರ ಪ್ರದೇಶ ಪರವಾನಿಗೆ ಹೊಂದಿದ  ವಾಹನದಲ್ಲಿ 4.8 ಕೆಜಿ ಬೆಳ್ಳಿ ಅಂದಾಜು ಮೌಲ್ಯ 1.21 ಲಕ್ಷ, 405 ಗ್ರಾಂ ಚಿನ್ನ ಅಂದಾಜು ಮೌಲ್ಯ 23.92 ಲಕ್ಷ ರೂ. ಹಾಗೂ 24.5 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆರೋಪಿತನ ಮೇಲೆ ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

51 ಪ್ರಕರಣ, 16.59 ಲಕ್ಷ ರೂ. ನಗದು ವಶಕ್ಕೆ:
ಅಬಕಾರಿ ಇಲಾಖೆಯಿಂದ 45 ಪ್ರಕರಣ ಹಾಗೂ ಫ್ಲೈಯಿಂಗ್ ಸ್ಕ್ವಾಡ್(ಎಫ್‌ಎಸ್)3, ಸ್ಟಾಟಿಕ್ ಸರ್ವೈವ್‌ಲೆನ್ಸ್ ಟೀಮ್(ಎಸ್‌ಎಸ್‌ಟಿ) 2 ಹಾಗೂ ಪೊಲೀಸ್ ಇಲಾಖೆ 1 ಸೇರಿದಂತೆ ಒಟ್ಟು 51ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ತಂಡಗಳು ಕಾರ್ಯಪ್ರವೃತ್ತವಾಗಿದ್ದು ,ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 ಫ್ಲೈಯಿಂಗ್ ಸ್ಕ್ವಾಡ್, 27 ಎಸ್‌ಎಸ್‌ಟಿ ತಂಡ ಹಾಗೂ 7 ಅಬಕಾರಿ ತಂಡ ಕೆಲಸ ನಿರ್ವಹಿಸುತ್ತಿವೆ. ಚುನಾವಣೆ ಕರ್ತವ್ಯದಲ್ಲಿ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಎಫ್ಎಸ್ ತಂಡದಿಂದ 6 ಲಕ್ಷ ರೂ., ಎಸ್‌ಎಸ್‌ಟಿ ತಂಡದಿಂದ 10.35 ಲಕ್ಷ ರೂ. ಹಾಗೂ ಪೊಲೀಸ್ ಇಲಾಖೆಯಿಂದ 24.5 ಸಾವಿರ ರೂ. ಸೇರಿದಂತೆ ಒಟ್ಟು 16.59 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 312 ಲೀ. ಮದ್ಯ, 710‌ ಗ್ರಾಂ ಡ್ರಗ್ಸ್, ಮತದಾರರಿಗೆ ಆಮಿಷವೊಡ್ಡುವ 82 ವಿವಿಧ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ