Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಟೋ ಮತ್ತು ಹೆವ್ವಿಲಾರಿ ಡಿಕ್ಕಿ : 6 ಜನ ಸ್ಥಳದಲ್ಲೇ ಸಾವು

ಸುದ್ದಿಮೂಲ ವಾರ್ತೆ

ಹೊಸಪೇಟೆ,ಜೂ.30:ಬಕ್ರೀದ್ ಹಬ್ಬದ ಆಚರಣೆಯಲ್ಲಿದ್ದ ಬಳ್ಳಾರಿಯ ಕೌಲ್‍ಬಜಾರ್‍ನ ಗೌತಮನಗರ ನಿವಾಸಿಗಳು ಪ್ರಯಾಣಿಸುತ್ತಿದ್ದ ಆಟೋ ಮತ್ತು ಲಾರಿ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್‍ಬಳಿ ಡಿಕ್ಕಿಯಾದ ಕಾರಣ ಆಟೋದಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಣೆ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರ ಜೊತೆ ಮಾತನಾಡಿದ್ದಾರೆ.



ಬಕ್ರೀದ್ ಹಬ್ಬದ ಆಚರಣೆಯ ನಂತರ, ಮುಸ್ಲಿಮರು ವಿಹಾರತಾಣಗಳಿಗೆ ಭೇಟಿ ನೀಡುವುದು ಸಹಜ. ಈ ನಿಟ್ಟಿನಲ್ಲಿ ಗೌತಮನಗರದ ನಿವಾಸಿಗಳು ಆಟೋದಲ್ಲಿ ತುಂಗಭದ್ರಾ ಜಲಾಶಯ ವೀಕ್ಷಣೆ ಮಾಡಿ ಶುಕ್ರವಾರ ಹಿಂದಿರುಗುತ್ತಿದ್ದಾಗ ವಡ್ಡರಹಳ್ಳಿ ಬಳಿ ಎದುರಿನಿಂದ ಬಂದ ಹೆವ್ವಿಲಾರಿಯು ಮುಖಾಮುಖಿ ಆದ ಕಾರಣ ಈ ದುರ್ಗಟನೆ ನಡೆದಿದೆ.

ಈ ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ವಿಮ್ಸ್ ನಿರ್ದೇಶಕ ಡಾ. ಬಿ. ಗಂಗಾಧರಗೌಡ ಅವರ ಜೊತೆ ಮತ್ತು ಸಂಬಂಧಿಸಿದ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಶಾಸಕ ಎಚ್.ಆರ್. ಗವಿಯಪ್ಪ ಪ್ರತಿಕ್ರಿಯೆ : ಶಾಸಕ ಎಚ್. ಆರ್. ಗವಿಯಪ್ಪ ಅವರು, ಬಕ್ರಿದ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದವರು ಅಸುನೀಗಿದ್ದು ದುಃಖಕರ ಸಂಗತಿ. ಅಪಘಾತ ನಡೆದ ಸ್ಥಳದಲ್ಲಿ ಸೇತುವೆ ಕಾಮಗಾರಿ ಅಪೂರ್ಣವಾಗಿದೆ. ಕಾರಣ ಅಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಲೇ ಇವೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ