Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಹಾರ: ಮೊದಲ ಹಂತದಲ್ಲಿ ಶೇ.64.66 ರಷ್ಟು ಮತದಾನ

ಪಟ್ನಾಾ (ಬಿಹಾರ) , ನ.06:
ಬಿಹಾರ ವಿಧಾನಸಭೆಯ 121 ಕ್ಷೇತ್ರಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.64.66ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಬಿಹಾರದ ಇತಿಹಾಸಲ್ಲಿ ಅತೀ ಹೆಚ್ಚು ಮತದಾನವಾಗಿದೆ. 3.75 ಕೋಟಿ ಮತದಾರರು ಅಂತಿಮ ಪಟ್ಟಿಿಯಲ್ಲಿದ್ದರು. ಇವರಲ್ಲಿ ಶೇ.64.66ರಷ್ಟು ಮತದಾನವಾಗಿದೆ. 2000ರಲ್ಲಿ ಶೇ. 62. 57ರಷ್ಟು ಮತದಾನವಾಗಿತ್ತು. 2020ರಲ್ಲಿ 57.29 ರಷ್ಟು ಮತದಾನವಾಗಿತ್ತು. ಈ ಬಾರಿ ಮತದಾನ ಅಧಿಕವಾಗಿದ್ದು ಇತಿಹಾಸ ಸೃಷ್ಟಿಿಯಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಗುರುವಾರ ಬೆಳಗ್ಗೆೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಬೇಗುಸರಾಯ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ.
ರಾಜ್ಯದ ಒಟ್ಟು 243 ಸ್ಥಾಾನಗಳ ಪೈಕಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.
ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿಿ ಯಾದವ್, ಅವರ ಸಹೋದರ ಮತ್ತು ಜನಶಕ್ತಿಿ ಜನತಾದಳ (ಜೆಜೆಡಿ) ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್, ಉಪ ಮುಖ್ಯಮಂತ್ರಿಿಗಳಾದ ಸಾಮ್ರಾಾಟ್ ಚೌಧರಿ, ವಿಜಯ್ ಕುರ್ಮಾ ಸಿನ್ಹಾಾ ಮತ್ತು ಅನಂತ್ ಸಿಂಗ್ ಅವರು ಸ್ಪರ್ಧಿಸಿರುವ ಕ್ಷೇತ್ರಗಳಿಗೆ ಇಂದು ಮತದನಾ ನಡೆಯಿತು.
ಭದ್ರತಾ ಕಾರಣಗಳಿಂದಾಗಿ, ಸಿಮ್ರಿಿ ಭಕ್ತಿಿಯಾರ್‌ಪುರ, ಮಹಿಷಿ, ತಾರಾಪುರ, ಮುಂಗೇರ್, ಜಮಾಲ್ಪುರ ಮತ್ತು ಸೂರ್ಯಗಢ ಕ್ಷೇತ್ರದ ವ್ಯಾಾಪ್ತಿಿಯ 56 ಬೂತ್‌ಗಳಲ್ಲಿ ಮತದಾನದ ಅವಧಿಯನ್ನು ಬೆಳಿಗ್ಗೆೆ 7 ರಿಂದ ಸಂಜೆ 6 ರವರೆಗೆ ಕಡಿಮೆ ಮಾಡಲಾಗಿದೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾಾತ್ಮಕ ಒಕ್ಕೂಟ (ಎನ್‌ಡಿಎ) ಅಧಿಕಾರವನ್ನು ಉಳಿಸಿಕೊಳ್ಳಲು ಮತ್ತು ಮಹಾಘಟಬಂಧನ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿಿವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ