Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಅ.30:ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಕನ್ನಡಪರ ನಾನಾ ಸಂಘಟನೆಗಳ ಒಕ್ಕೂಟ ‘ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ನ.1ರಂದು ಶಿಡ್ಲಘಟ್ಟದಲ್ಲಿ 67 ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಸಮಾನ ಮನಸ್ಕರ ಹೋರಾಟ ಸಮಿತಿಯ ವಿಸ್ಡಂ ನಾಗರಾಜ್ ಹೇಳಿದರು.

ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಸಾರಿಗೆ ಬಸ್ ನಿಲ್ದಾಣದಲ್ಲಿ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಶಾಸಕ ಬಿ.ಎನ್.ರವಿಕುಮಾರ್ ಹಾಗೂ ತಹಸೀಲ್ದಾರ್ ಬಿ.ಎನ್.ಸ್ವಾಮಿ ಅವರು ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ತಾಲ್ಲೂಕಿನ 28 ಗ್ರಾ.ಪಂ. ಗಳಿಂದ ತಾಯಿ ಭುವವೇಶ್ವರಿಯ ಪಲ್ಲಕಿಯೊಂದಿಗೆ 20 ವಿದ್ಯಾರ್ಥಿಗಳಿಂದ ಕನ್ನಡ ಭಾವುಟಗಳು ಹಾಗೂ ಪ್ರಥಮ ದರ್ಜೆ ಕಾಲೇಜು ವತಿಯಿಂದ 150 ಅಡಿ ಉದ್ದ ಹಾಗೂ 8 ಅಡಿ ಅಗಲದ ಕನ್ನಡ ಧ್ವಜದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಮದ್ಯಾಹ್ನ 1 ಗಂಟೆಗೆ ಕೋಟೆ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಂಜೆ ಅದೆ ಪುನಿತ್ ರಾಜಕುಮಾರ್ ವೇದಿಕೆಯಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಕನ್ನಡ ಅಭಿಮಾನಿಗಳು ವರ್ತಕರು, ಮಾದ್ಯಮ ಮಿತ್ರರು, ರೈತಾಪಿ ವರ್ಗ, ದಲಿತಪರ ಸಂಘಟನೆಗಳು, ವಿವಿಧ ಸಂಘಟನೆಗಳು ಸಹಯೋದೊಂದಿಗೆ ಈಭಾರಿ ಅದ್ದೂರಿಯೊಂದಿಗೆ ಆಚರಣೆ ಮಾಡುತ್ತಿದ್ದೇವೆ ಎಂದರು.

ಸಮಾನ ಮನಸ್ಕರ ಹೋರಾಟ ಸಮಿತಿಯ ರಾಮಾಂಜಿ ಮಾತನಾಡಿ ಡಾ.ಪುನೀತ್ ರಾಜ್‌ಕುಮಾರ್ ವೇದಿಕೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ, ನಟ ವಿನೋದ್ ಪ್ರಭಾಕರ್, ಹಾಸ್ಯ ನಟ ಟೆನ್ನೀಸ್ ಕೃಷ್ಣ, ಮಿಮಿಕ್ರಿ ಕಲಾವಿದ ದೀಕ್ಷಿತ್, ಉದಯಟಿವಿಯ ಕಾಮಿಡಿ ನಟಿ ರಾಜೇಶ್ವರಿ ಇನ್ನಿತರರು ಭಾಗವಹಿಸಲಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಾನಾ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಆಚರಣೆಯ ದಿನದಂದು ನಗರದಲ್ಲಿ ಮನೆ ಮನೆ ಮುಂದೆ ರಂಗೋಲೆ ಹಾಕಿ ದೀಪ ಹಚ್ಚಬೇಕೆಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಎಂ.ರವಿಪ್ರಕಾಶ್, ಪ್ರತೀಶ್, ದೀಪು, ಮಂಜುನಾಥ್, ಮಧುಲತಾ, ಸುನೀಲ್, ಸೋಮಶೇಖರ್, ಮಂಜುನಾಥ್ ಇನ್ನಿತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ