Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ : ಉಪ ಲೋಕಾಯುಕ್ತ ಕೆ.ಎನ್ ಫಣೀಂದ್ರ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಆ. 8 : ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್ ಫಣೀಂದ್ರ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ನಾಲ್ಕು ದಿನದ ಪ್ರವಾಸದ ಮೊದಲ ದಿನದ ಶನಿವಾರದಂದು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 81 ದೂರುಗಳು ಸಲ್ಲಿಕೆಯಾಗಿವೆ. ಅದರಲ್ಲಿ 03 ವಿವಿಧ ಪ್ರಕರಣಗಳು ಎಂದು ಗುರುತಿಸಲಾಗಿದೆ. 23 ಪ್ರಕರಣಗಳು ಕಾನೂನು ಸಲಹೆ, ಮೇಲ್ಮನವಿ, ಪೋಲಿಸ್ ತನಿಖೆ ಎಂದು ವಿಭಜಿಸಲಾಗಿದ್ದು, ಆಯಾ ವ್ಯಾಪ್ತಿಗೆ ಪ್ರಕರಣ ಹಸ್ತಾಂತರಿಸಲಾಗುವುದು ಎಂದರು.

ಸೋಮವಾರದಂದು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ 74 ಪ್ರಕರಣ ವಿಚಾರಣೆ ನಡೆಸಿ 55 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಮಂಗಳವಾರದಂದು 42 ಪ್ರಕರಣಗಳ ವಿಚಾರಣೆ ನಡೆಸಿ 33 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿ, ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ, ಪೌತಿ ಖಾತೆ, ಖಾತೆ ಬದಲಾವಣೆ, ಲಂಚಕ್ಕೆ ಬೇಡಿಕೆ, ಸರ್ಕಾರಿ ಆದೇಶಗಳನ್ನು ನೀಡಲು ವಿಳಂಬ, ಜಮೀನು ಸರ್ವೇ ಕಾರ್ಯ, ನಿವೃತ್ತ ಸರ್ಕಾರಿ ನೌಕರರ ಪಿಂಚಣಿ, ಕ್ರಯ ಪತ್ರ, ನೀರಿನ ಸಮಸ್ಯೆ, ಗಡಿ ಗುರುತಿಸುವಿಕೆ ಮುಂತಾದ ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ದೂರು ನೀಡಲು ಬಂದಾಗ ಗೌರವದಿಂದ ನಡೆಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆ ಮೇಲಿನ ನಂಬಿಕೆಯನ್ನು ಕಾಪಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ನಿರೀಕ್ಷೆಗಳಿಲ್ಲದೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಕೆಲವು ಬಾರಿ ದೂರುದಾರರು ಹಾಗೂ ಎದುರುದಾರರು ಇಬ್ಬರಲ್ಲೂ ತಪ್ಪು ಕಂಡುಬರಬಹುದು. ಮುಂದೆ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಬೇಕು ಎಂದು ಸರ್ಕಾರಿ ನೌಕರರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ ಚನ್ನಕೇಶವ ರೆಡ್ಡಿ, ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ