Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎ.ನಾರಾಯಣಪುರದ ಶ್ರೀವೆಂಕಟೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ, ಸೆ. 9 : ಕಡೆ ಶ್ರಾವಣ ಶನಿವಾರ ಅಂಗವಾಗಿ ಎ.ನಾರಾಯಣಪುರದ ಶ್ರೀವೆಂಕಟೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಕೆ.ಆರ್.ಪುರ ಸಮೀಪದ ಎ.ನಾರಾಯಣಪುರ ಮತ್ತು ಉದಯನಗರದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ಪೂಜಾ ಕುಣಿತ, ತಮಟೆ ವಾದ್ಯ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ನಡೆಸಲಾಯಿತು. ಕಡೆ ಶನಿವಾರ ಪ್ರಯುಕ್ತ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಉತ್ಸವ ದೇವರಿಗೆ ವಿಶೇಷ ಪೂಜೆ,ವಿವಿಧ ದ್ರವ್ಯಗಳಿಂದ ಅಭಿಷೇಕ, ಹೋಮ, ಹವನ ಹಾಗೂ ಮಹಾಮಂಗಳಾರತಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಲಾಯಿತು.

ದೇವಾಲಯದಲ್ಲಿ ಬಗೆ ಬಗೆಯ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ನಾಲ್ಕನೇ ಶ್ರಾವಣ ಶನಿವಾರ ಪ್ರಯುಕ್ತ ಹಮ್ಮಿಕೊಂಡಿದ್ದ ಬ್ರಹ್ಮರಥೋತ್ಸವದಲ್ಲಿ ಎ.ನಾರಾಯಣಪುರ, ಟಿನ್ ಪ್ಯಾಕ್ಟರಿ, ಪೈಲೇಔಟ್, ಅಕಾಶ್ ಬಡಾವಣೆ, ಜ್ಯೋತಿಪುರ ಮುಂತಾದ ವಿವಿಧ ಪ್ರದೇಶಗಳಿಂದ ಆಗಮಿಸಿದ ನೂರಾರು ಭಕ್ತರು ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ಧನ್ಯತಾಭಾವ ಮೆರೆದರು.

ಬ್ರಹ್ಮ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ವಿ.ಸುರೇಶ್, ಮುಖಂಡರಾದ ಪ್ರದೀಪ್ ರೆಡ್ಡಿ, ಸಂತೋಷ, ಯಶವಂತ್, ವಸಂತ್, ಗಿರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ