Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾರಂಪರಿಕ ಟಾಂಗಾ ಸವಾರಿ ಮಾಡಿದ ದಂಪತಿ

ಸುದ್ದಿಮೂಲ ವಾರ್ತೆ

ಮೈಸೂರು, ಅ.19:ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ. ಅವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡಗಳನ್ನು ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ತಿಳಿಸಿದರು.

ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಉಡುಗೆ ಹಾಗೂ ಪಾರಂಪರಿಕ ಟಾಂಗಸವಾರಿ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೇ ಮಾಡಲು ಆಗಲ್ಲ. ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಸಚಿವರು ತಮ್ಮ ಪತ್ನಿಯೊಂದಿಗೆ ಪಾರಂಪರಿಕ ಟಾಂಗಾ ಸವಾರಿ ಮಾಡಿದರು. ನಂತರ ಪುರಾತತ್ವ ಇಲಾಖೆಯ ಆಯುಕ್ತ ದೇವರಾಜು, ಮಹಾಪೌರರಾದ ಶಿವಕುಮಾರ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಸುನೀಲ್ ಬೋಸ್ ದಂಪತಿಗಳಿಗೆ ಬಾಗಿನ ನೀಡಿದರು.

ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದಾಗಿದೆ. ಇಂತಹ ಕಟ್ಟಡಗಳನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು "ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮ"ವನ್ನು ಹಮ್ಮಿಕೊಂಡಿದ್ದು, ಅದು ಯಶಸ್ವಿಯಾಗಿ ಸಾಗುತ್ತಿದೆ ಎಂದರು.

ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂದ ಚರ್ಚಿಸಿದ್ದೆನೆ. ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯಕಾರ್ಯನಿರ್ವಾಹಕ ರಾಜಶೇಖರ್ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ