Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ್ಳೆಯ ಪುಸ್ತಕ ಜೀವನದ ನಿಜವಾದ ಸ್ನೇಹಿತ : ರಾಜ್ಯಪಾಲರು

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.10:ನಗರದ ಬಸವನಗುಡಿ ಎನ್.ಆರ್. ಕಾಲೋನಿಯಲ್ಲಿ ಡಾ. ಸಿ. ಅಶ್ವಥ್ ಕಲಾ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿರಿಯ ಪತ್ರಕರ್ತೆ ಮೇರಿ ಜೋಸೆಫ್ ಅವರು ಕನ್ನಡಕ್ಕೆ ಅನುವಾದ ಮಾಡಿರುವ ಗೋವಾದ ರಾಜ್ಯಪಾಲರಾದ ಶ್ರೀಧರನ್ ಪಿಳ್ಳೈ ಅವರ "ಗಿಳಿಯು ಬಾರದೇ ಇರದು" ಪುಸ್ತಕವನ್ನು ಹಿರಿಯ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ್ ಅವರು ಬಿಡುಗಡೆಗೊಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮನುಷ್ಯನ ಜೀವನದಲ್ಲಿ ಪುಸ್ತಕಗಳು ಉತ್ತಮ ಮಾರ್ಗದರ್ಶಿ ಹಾಗೂ ಜೀವನದ ಸ್ನೇಹಿತ. ಪುಸ್ತಕಗಳು ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ನಾವು ದುಃಖ ಮತ್ತು ಖಿನ್ನತೆಗೆ ಒಳಗಾದಾಗ ನಮಗೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಒಳ್ಳೆಯ ಪುಸ್ತಕಗಳು ನಮ್ಮ ಮನಸ್ಸನ್ನು ಶಾಂತವಾಗಿಡಲು ಮತ್ತು ನಮ್ಮ ಆಲೋಚನೆಗಳನ್ನು ಪೋಷಿಸಲು ಸಹಾಯ ಮಾಡುತ್ತದೆ. ಅಲ್ಲದೇ, ಒಳ್ಳೆಯ ಪುಸ್ತಕಗಳು ಸ್ಫೂರ್ತಿ, ಜ್ಞಾನ, ನೈತಿಕ ಶಿಕ್ಷಣವನ್ನು ನೀಡುತ್ತವೆ ಮತ್ತು ಕೆಲವು ಪುಸ್ತಕಗಳು ಜನರ ಜೀವನದಲ್ಲಿ ಹೊಸ ತಿರುವು ತರುತ್ತವೆ. ಹಾಗಾಗಿ, ಪ್ರತಿಯೊಬ್ಬರು ಜೀವನದಲ್ಲಿ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಜೀವನದ ನಿಜವಾದ ಸ್ನೇಹಿತನನ್ನು ಕಂಡುಕೊಳ್ಳಬೇಕು ಎಂದು ಕರೆ ನೀಡಿದರು.

ಮಲಯಾಳಂ ನ "ತತ್ತಾ ವರಾಧಿರಿಕ್ಕಿಲ್ಲಾ" ಎಂಬ ಪುಸ್ತಕವನ್ನು ಹಿರಿಯ ಪತ್ರಕರ್ತೆ ಮೇರಿ ಜೋಸೆಫ್ ಅವರು ಕನ್ನಡ ಭಾಷೆಯಲ್ಲಿ "ಗಿಳಿಯು ಬರದೇ ಇರದು" ಎಂದು ಅನುವಾದಿಸಿದ್ದಾರೆ. ಈ ಪುಸ್ತಕದಲ್ಲಿ ಗ್ರಾಮೀಣ ಜೀವನ, ಜೀವನ ಮೌಲ್ಯಗಳು, ಮಾನವೀಯ ದೃಷ್ಟಿಕೋನವನ್ನು ಸಣ್ಣ ಕಥೆಗಳ ಮೂಲಕ ಅತ್ಯಂತ ಸರಳವಾಗಿ ಪ್ರಸ್ತುತಪಡಿಸಲಾಗಿದೆ. ಈ ಪುಸ್ತಕವು ಕನ್ನಡ ಭಾಷೆಯಲ್ಲೂ ಜನಪ್ರಿಯವಾಗಲಿದೆ ಎಂಬ ನಂಬಿಕೆ ಇದೆ ಎಂದರು.

ಪುಸ್ತಕವನ್ನು ಬರೆಯುವುದು ಎಷ್ಟು ಸವಾಲಿನ ಕೆಲಸ ಎಂದು ನಮಗೆಲ್ಲರಿಗೂ ತಿಳಿದಿದೆ. ಶ್ರೀಧರನ್ ಪಿಳ್ಳೈ ಅವರು ಸಣ್ಣ ಕಥೆಗಳ ಸರಣಿಯನ್ನು ಬರೆದರು ಮತ್ತು ಅವುಗಳನ್ನು ಪುಸ್ತಕವನ್ನಾಗಿ ಮಾಡಿದರು. ಇವರಿಗೆ ಬರವಣಿಗೆಯ ಉತ್ಸಾಹವಿದೆ, ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ, ತಮ್ಮ ಉತ್ಸಾಹವನ್ನು ಪೂರೈಸಲು ಪುಸ್ತಕವನ್ನು ಬರೆಯಲು ಸಮಯ ತೆಗೆದುಕೊಂಡು ಅಧ್ಯಯನ ಆಸಕ್ತಿಯನ್ನು ಹೆಚ್ಚಿಸುವ ಶ್ರೀಧರನ್ ಪಿಳ್ಳೈ ಅವರು ಈ ನಡೆ ನಮಗೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.

ಹೊಸ ಚೈತನ್ಯ ಮತ್ತು ಹೊಸ ಉತ್ಸಾಹದಿಂದ ಅವರ ಬರೆವಣಿಗೆ ಮುಂದುವರೆಯಲಿ ಹಾಗೂ ಸಮಾಜಕ್ಕೆ ಮಾರ್ಗದರ್ಶನ ನೀಡುವಂತಾಗಲಿ ಎಂದು ಹಾರೈಸುತ್ತೇನೆ. ಹಿರಿಯ ಪತ್ರಕರ್ತೆ ಮೇರಿ ಜೋಸೆಫ್ ಅವರಿಗೆ ಅಭಿನಂದಿಸಿ, ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು ಎಂದರು.

ಕಾರ್ಯಕ್ರಮದಲ್ಲಿ ಗೋವಾದ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ, ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್, ಹಿರಿಯ ಪತ್ರಕರ್ತೆ ಮೇರಿ ಜೋಸೆಫ್, ಸಾಹಿತಿ ಶೋಭಾ ರಾವ್, ವೀರ ಲೋಕ ಪ್ರಕಾಶನ ಸಂಸ್ಥೆಯ ಪ್ರಕಾಶಕರಾದ ವೀರಕಪುತ್ರ ಶ್ರೀನಿವಾಸ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ