Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆಯಂತೆ ಕಾಣುತ್ತಿರುವ ಸರ್ಕಾರಿ ಶಾಲೆಯ ಅಂಗಳ 

ಸುದ್ದಿಮೂಲ ವಾರ್ತೆ

ಚೇಳೂರು,ನ.22:ಚಿಕ್ಕಬಳ್ಳಾಪುರದ ಚೇಳೂರಿನ ವಡ್ಡಿವಾಂಡ್ಲಪಲ್ಲಿ ಸರ್ಕಾರಿ ಶಾಲೆ ಅಂಗಳ ನಿನ್ನೆ ಸುರಿದ ಧಾರಾಕಾರ ಮಳೆಗೆ ನೀರು ನಿಂತು ಕೆರೆಯಂಗಳದಂತೆ ಮಾರ್ಪಟ್ಟಿದೆ, ಮಳೆ ಬಂದಾಗಲೆಲ್ಲಾ ಇದೆ ಪರಿಸ್ಥಿತಿ. ಪರಿಣಾಮ ಮಕ್ಕಳು ಹಾಗು ಶಿಕ್ಷಕರು ಓಡಾಡಲು ಆಗದೇ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಲು ಮಕ್ಕಳು ಹಾಗು ಪೋಷಕರು ಮನವಿ ಮಾಡಿದ್ದಾರೆ.

ಅಲ್ಪ ಸ್ವಲ್ಪ ಮಳೆ ಬಂದರು ಶಾಲೆಯ ಮುಂದೆ ನೀರು ನಿಂತುಕೊಳ್ಳುತ್ತವೆ. ಅಂಗಳದಲ್ಲಿ ತಗ್ಗು ಇರುವುದರಿಂದ ನೀರು ಹರಿಯದೆ ಅಲ್ಲೇ ನಿಲ್ಲುವುದರಿಂದ ಸಮಸ್ಯೆಯಾಗಿ ಪರಿಗಣಿಸಿದೆ. ಇದರಿಂದ ಶಾಲೆಯ ಅಧಿಕಾರಿಗಳಾಗಲಿ ಹಾಗೂ ಪಂಚಾಯ್ತಿ ಅಧಿಕಾರಿಗಳಾಗಲಿ ಅಂಗಳದಲ್ಲಿ ಮಣ್ಣು ತುಂಬಿಸಿ ನೀರು ಹರಿಯಲು ಅನುವು ಮಾಡಿಕೊಡಲು ಮಕ್ಕಳು ಮನವಿ ಮಾಡಿದ್ದಾರೆ.

ಈ ಶಾಲೆಯಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು ಇಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ಶಾಲೆಯಲ್ಲಿ ಒಂದರಿಂದ ಆರನೇ ತರಗತಿಯ ಸುಮಾರು 30 ರಿಂದ 40 ಮಕ್ಕಳು ಇದ್ದು, ಕೆಲ ವರ್ಷಗಳಿಂದ ಮೂಲಭೂತ ಸೌಲಭ್ಯಗಳಿಲ್ಲದೆ ಮಕ್ಕಳು ಗೋಳಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಸುಮ್ಮನೆ ಕುಳಿತಿರುವುದು ವಿಪರ್ಯಾಸ. ಸುಮಾರು ದಿನಗಳಿಂದ ಮೇಲಾಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳು ಕಲ್ಪಿಸಿಕೊಡಿ ಎಂದು ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಹುಸಿ ಭರವಸೆಗಳನ್ನು ಕೊಟ್ಟು ಹೋಗುತ್ತಾರೆ ಹೊರೆತು ಕೆಲಸ ಮಾಡಿಕೊಡಲ್ಲ ಎಂದು ಎಸ್‌ ಡಿ ಎಂಸಿ ಅಧ್ಯಕ್ಷ ನರಸಿಂಹಪ್ಪ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ