Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಸನಕಂಡಿ ಅರಣ್ಯ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.4: ತಾಲೂಕಿನ ಕಾಸನಕಂಡಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರಣ್ಯವಲಯದಲ್ಲಿ ಕಳೆದ ಐದಾರು ತಿಂಗಳಿಂದ ಆಗಾಗ ಚಿರತೆಯೊಂದು ಪ್ರತ್ಯಕ್ಷ ಆಗುತ್ತಿದ್ದು, ಇಂದು ಬೆಳಿಗ್ಗೆ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಸೆರೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಬಗ್ಗೆ ಸಾರ್ವಜನಿಕರು ಆಗಾಗ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳ ಗಮನ ಸೆಳೆಯುತ್ತಿದ್ದರು. ಇಂದು ಬೆಳಗಿನ ಜಾವ ಚಿರತೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

ತುಂಗಭದ್ರಾ ಹಿನ್ನೀರಿನ ಸ್ಥಳವಾದ ಕಾಸನಕಂಡಿ ಅರಣ್ಯ ವಲಯದಲ್ಲಿ ಆಗಾಗ ದರ್ಶನ ಕೊಡುವ ಚಿರತೆಯು ಅಲ್ಲಿನ ಸುತ್ತಮುತ್ತ ಗ್ರಾಮದ ಜನರಿಗೆ ಅದೃಷ್ಟ ಎಂಬಂತೆ ಇಲ್ಲಿಯ ತನಕ ಯಾವುದೇ ರೀತಿಯ ಪ್ರಾಣ ಹಾನಿ ಮಾಡಿಲ್ಲ. ಇದೆ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಸಮೀಪದ ಕೋಳಿ ಫಾರಂನಲ್ಲಿ ಸಾಕಷ್ಟು ನಾಯಿಗಳಿವೆ, ಆ ಬೆಟ್ಟದ ಪ್ರದೇಶದಲ್ಲಿ ಮೇಯಲು ಹೋಗುತ್ತಿರುವ ಯಾವುದೇ ಕುರಿ ಮೇಕೆಗಳು ದನಕರುಗಳ ಮೇಲೆ ಇಲ್ಲಿ ತನಕ ಯಾವುದೇ ದಾಳಿ ಮಾಡಿರುವ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಈ ಚಿರತೆ ಪ್ರತ್ಯಕ್ಷವಾದ ಸ್ಥಳದ ಸಮೀಪ ಎಚ್ ಆರ್ ಜಿ ಕಾರ್ಖಾನೆ, ಬೆಟ್ಟದ ವೀರಾಂಜನೇಯ ದೇವಸ್ಥಾನ, ಪಶ್ಚಿಮಕ್ಕೆ ಕೂಗಳತೆಯ ದೂರದಲ್ಲಿ ಕಾಸನಕಂಡಿ ಗ್ರಾಮ, ಅದಕ್ಕೆ ಹೊಂದಿಕೊಂಡಿರುವ ಉತ್ತರ ದಿಕ್ಕಿನಂಚಿಗೆ ಸಾಲುಮರದ ತಿಮ್ಮಕ್ಕ ಉದ್ಯಾನವನ ಇರುವುದರಿಂದ ಈ ಪ್ರದೇಶಗಳಿಗೆ ರಸ್ತೆಯ ಮೂಲಕ ಬರುವ ಜನರಲ್ಲಿ ಭಯದ ಆತಂಕ ಶುರುವಾಗಿತ್ತು. ಈಗ ಚಿರತೆ ಸೆರೆಹಿಡಿದಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ