Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲಾ ಮಕ್ಕಳಿಗೆ ಆಹಾರ ದಾಸ್ತಾನು ಸುರಕ್ಷಿತೆಯ ಬಗ್ಗೆ ಪಾಠ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಜು.16: ಭಾರತೀಯ ಆಹಾರ ನಿಗಮದ ಕಾರ್ಯ ವೈಖರಿ ಹಾಗೂ ಆಹಾರ ಭದ್ರತಾ ಕಾಯಿದೆ ದಾಸ್ತಾನು ಸುರಕ್ಷತೆಯ ಬಗ್ಗೆ ಸರ್ಕಾರಿ ಶಾಲಾ ಮಕ್ಕಳಿಗೆ‌ ಭಾರತೀಯ ಆಹಾರ ನಿಗಮದ ಅಧಿಕಾರಿಗಳು ತಿಳಿಸಿದರು.

ವೈಟ್‌ ಫೀಲ್ಡ್ ನ ಡಿಪೋದಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ನಿಗಮದ ವೈವಾಟಿನ ಬಗ್ಗೆ ಜಿಎಚ್ ಪಿಎಸ್ ಸರ್ಕಾರಿ ಶಾಲಾ ಮಕ್ಕಳಿಗೆ ಯಾವ ಯಾವ ರಾಜ್ಯ ಗಳಿಂದ ಅಕ್ಕಿ ಗೋಧಿ ಯನ್ನು ಅಮದು ಮಾಡಿಕೊಂಡು ಅದನ್ನು ಯಾವ ರೀತಿ ಸುರಕ್ಷಿತವಾಗಿ ಇಡಬೇಕು ಮತ್ತು ತುರ್ತುಪರಿಸ್ಥಿತಿಯಲ್ಲಿ ಯಾವ ರೀತಿ ಸರಬರಾಜು ಮಾಡಲಾಗುತ್ತದೆ ತಿಳಿಸಿದರು.

ಹಾಗೇ ರೈತರಿಂದ ಖರೀದಿಸುವ ಅಕ್ಕಿಯನ್ನು ಗೋದಾಮಿನಲ್ಲಿ ಸಂಗ್ರಹಿಸಿ ಬಡವರಿಗೆ ಅಕ್ಕಿ, ಗೋಧಿ ದಾಸ್ತಾನುಗಳನ್ನು ತಲುಪಿಸುವ ಯೋಜನೆಗಳ ಬಗ್ಗೆ ವಿವರಿಸಿದರು.

ಭಾರತೀಯ ಆಹಾರ ನಿಗಮದ ವೈಟ್ ಫೀಲ್ಡ್ ಡಿಪೋ ಅಧಿಕಾರಿಗಳಾದ ಕೆ.ನಾಗೇಶ್ವರ ರಾವ್ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ, ಅಂತ್ಯೋದಯ ಅನ್ನ ಯೋಜನೆ (NFSA-AAY), ಮಧ್ಯಾಹ್ನದ ಬಿಸಿ ಊಟ (MDM), ಕಲ್ಯಾಣ ಸಂಸ್ಥೆಗಳು ಮತ್ತು ವಸತಿ ನಿಲಯಗಳ ಯೋಜನೆ, ರಾಜ್ಯ ನಾಗರಿಕ ಸರಬರಾಜು (WIF) ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ಕಾರ್ಯಗಾರದಲ್ಲಿ ಟಿಸಿ ಸಜಾನಿಮೋಲ್, ಬಿ ಸಿದ್ದಯ್ಯ ನಾಯಕ್, ರಾಜಶೇಖರ್, ಎಚ್.ಎನ್. ಮೋಹನ್ ಮತ್ತು ಜಿಎಚ್‌ಪಿಎಸ್ ಶಾಲೆಯ ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ