Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲೆಯನ್ನು ದುರಸ್ಥಿಗಳಿಸುವಂತೆ ಮನವಿ

ಸುದ್ದಿಮೂಲ ವಾರ್ತೆ

ಮಾಲೂರು, ಜೂ 14 : :ಶಿಥಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ರೈತಸಂಘದ ಅಧ್ಯಕ್ಷ ಎಂ. ಹೊಸಹಳ್ಳಿ ವೆಂಕಟೇಶ್ ಒತ್ತಾಯಿಸಿದ್ದಾರೆ.

ಪಟ್ಟಣದ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಶಿಥಲಗೊಂಡಿರುವ ಸರ್ಕಾರಿ ಶಾಲಾ ಕಟ್ಟಡಗಳನ್ನು ಕೂಡಲೇ ದುರಸ್ತಿ ಮಾಡಿ ನವೀಕರಿಸಬೇಕು. ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕದ ದoಧೆಯನ್ನು ತಡೆದು ಶುಲ್ಕದ ದರದ ಪಟ್ಟಿಯನ್ನು ನಾಮ ಫಲಕದಲ್ಲಿ ನಮೂದಿಸಲು ಸೂಚಿಸುವಂತೆ ಆಗ್ರಹಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ರೈತರ ಮಕ್ಕಳಿಗೆ ಶುಲ್ಕದಲ್ಲಿ ಶೇ 25% ರಿಯಾಯಿತಿ ಕೊಡಬೇಕು. ಕೆಲವು ಶಾಲೆಗಳು ದುಡ್ಡು ಮಾಡುವ ಉದ್ದೇಶದಿಂದ ಅಕ್ರಮವಾಗಿ ನಡುಸುತಿದ್ದು ಅಂತಹ ಖಾಸಗಿ ಶಾಲೆಗಳ ವಿರುದ್ಧ ತನಿಖೆ ಮಾಡಿ ಕ್ರಮ ಕೈ ಗೊಳ್ಳಬೇಕು. ಅವಶ್ಯಕತೆಯಿರುವ ಕಡೆ ಸರ್ಕಾರಿ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಿ ಸರ್ಕಾರಿ ಶಾಲೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು.

ಮನವಿಯ ಸ್ವೀಕರಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ ವೆಂಕಟಪ್ಪ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಸಂಚಾಲಕ ಶ್ರೀನಾಥ್, ಗೌರವ ಅಧ್ಯಕ್ಷ ನಜೀರ್ ಉಲ್ಲಾ, ಉಪಾಧ್ಯಕ್ಷ ಪ್ರಭಾಕರ್, ಸದಸ್ಯ ತಿಪ್ಪಣ್ಣ, ಹನುಮoತಪ್ಪ, ಮಹಿಳಾ ಅಧ್ಯಕ್ಷೆ ಅನುಶ್ರೀ, ಕಾರ್ಯದರ್ಶಿ ಲತಾ ಇತರರು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ