Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಪದಕ ಗೆದ್ದ ಗ್ರಾಮೀಣ ಪ್ರತಿಭೆ

ಸುದ್ದಿಮೂಲ ವಾರ್ತೆ

ತುಮಕೂರು,ಆ.7:ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ವಿನೂತ .ಪಿ ಅವರು ಪತ್ರಿಕೋದ್ಯಮ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದು ಸ್ವರ್ಣ ಪದಕ ಪಡೆದಿದ್ದಾರೆ.

ತುಮಕೂರು ವಿಶ್ವವಿದ್ಯಾನಿಲಯದ 16ನೇ ವಾರ್ಷಿಕ ಘಟಿಕೋತ್ಸವದಲ್ಲಿ ಹಾಲಪ್ಪ ಫೌಂಡೆಷನ್ ವತಿಯಿಂದ ಕೊಡ ಮಾಡುವ ಸ್ವರ್ಣ ಪದಕವನ್ನು ಪತ್ರಿಕೋದ್ಯಮ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದಿರುವ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಲಭಿಸಿರುವುದು ಸಂತಸ ತಂದಿದೆ.

ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿ ಹೋಬಳಿಯ ಕುಂದೂರು ಪಾಳ್ಯದ ನಿವಾಸಿಯಾಗಿರುವ ವಿನೂತ ಬಾಣಸಂದ್ರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ತುರುವೇಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿ, ಬಾಣಸಂದ್ರದ ವಿಎಸ್‌ಎಸ್‌ ಪ.ಪೂ. ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬಿಎ ಪತ್ರಿಕೋದ್ಯಮ ಪದವಿಯನ್ನು ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ತುಮಕೂರು ವಿಶ್ವವಿದ್ಯಾನಿಲಯದಿಂದ ಸ್ವರ್ಣ ಪದಕ ಪಡೆದು ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿದ್ದಾರೆ.

ಪೋಷಕರನ್ನು ಕಳೆದುಕೊಂಡಿರುವ ವಿನುತಾ ಹಾಗೂ ಸಹೋದರಿಗೆ ಅವರ ತಂದೆ ಬೆಳೆಸಿದ 20 ತೆಂಗಿನ ಮರಗಳಿಂದ ಬರುವ ಆದಾಯದಿಂದಲೇ ಜೀವನ ಮತ್ತು ವಿದ್ಯಾಭ್ಯಾಸ ಮುಂದುವರೆಸುತ್ತಿದ್ದಾರೆ.

ವಿನೂತ ಅವರು ಮುಂದೆ ಐಎಎಸ್ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದು, ಉನ್ನತ ಹುದ್ದೆಗೆ ಹೋಗುವ ಗುರಿಯನ್ನು ಹೊಂದಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ