Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈ.ಕ. ಪ್ರದೇಶಕ್ಕೆ ಪ್ರತ್ಯೇಕ ಸಚಿವಾಲಯ ರಚನೆಯಾಗಲಿ: ಸಾಹಿತಿ ಬೆಟ್ಟದೂರು

ಸುದ್ದಿಮೂಲ ವಾರ್ತೆ

ಕುಷ್ಟಗಿ, ಜು. 05:ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕವಾಗಿ ಸಚಿವಾಲಯ ರಚನೆಯಾಗಬೇಕು ಎಂದು ಹಿರಿಯ ಬಂಡಾಯ ಸಾಹಿತಿ ಹಾಗೂ ಹೈದರಾಬಾದ್ ಕರ್ನಾಟಕ 371ಜೆ ತಿದ್ದುಪಡಿ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಅವರು ಒತ್ತಾಯಿಸಿದರು.

ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಹಾತಪಸ್ವಿ ಮುರಡಿ ಭೀಮಜ್ಜ 67ನೇ ಪುಣ್ಯತಿಥಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ದಿ.ಪುಂಡಲೀಕಪ್ಪ ಜ್ಞಾನಮೋಟೆ ಅವರ 10ನೇ ಪುಣ್ಯಸ್ಮರಣೆ ಹಾಗೂ ಹೈ.ಪ್ರಾ. ವಿಮೋಚನೆ ಸ್ವಾತಂತ್ರ್ಯಯೋಧರಿಗೆ ಗೌರವ ನಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಈ ಭಾಗಕ್ಕೆ ಸಾವಿರಾರು ಕೋಟಿ ಅನುದಾನ ಹರಿದು ಬಂದರೂ ಖರ್ಚಾಗದೇ ಮರಳಿ ಸರ್ಕಾರದ ಬೊಕ್ಕಸಕ್ಕೆ ಹೋಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆ ಈ ಭಾಗದ ಏಳು ಜೆಲ್ಲೆಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ರಚನೆ ಆಗಬೇಕು. ಅದು ಇಲ್ಲಿಯೇ ಸ್ಥಾಪನೆ ಆಗಬೇಕು ಎಂದ ಅಲ್ಲಮಪ್ರಭು ಬೆಟ್ಟದೂರು, ಈ ಭಾಗದ ಪ್ರತಿ ಜಿಲ್ಲೆಯಲ್ಲಿ ಅಂಗ ಸಂಸ್ಥೆಗಳಿರಬೇಕು ಎಂದರು.

ಹೋರಾಟ ಸಮಿತಿ ರಚನೆ: ಹೈದರಾಬಾದ್ ಕರ್ನಾಟಕ ಜನತೆ ಎಚ್ಚೆತ್ತಿದ್ದಾರೆ. ಹೋರಾಟ ಮನೋಭಾವ ಹೋಂದಿದ್ದಾರೆ. ಈ ನಿಟ್ಟಿನಲ್ಲಿ ಕೊಪ್ಪಳದಲ್ಲಿ ಈಚೆಗೆ ಹೈದರಾಬಾದ್ ಕರ್ನಾಟಕ ಸೌಹಾರ್ದ ವ ಸಂಘರ್ಷ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ. ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿಕೊಂಡು ನಮ್ಮ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಸಂಘರ್ಷ ಹೋರಾಟ ಮೂಲಕ ಈಡೇರಿಸಿಕೊಳ್ಳಬೇಕು ಎಂಬ ಧ್ಯೇಯ ಸಮಿತಿ ಹೊಂದಿದೆ. ಈ ಭಾಗದ ಏಳು ಜಿಲ್ಲೆಗಳಲ್ಲಿ ಸಮಿತಿಯ ಹೋರಾಟದ ಸಿದ್ಧತೆಗಳ ಬಗ್ಗೆ ಶೀಘ್ರದಲ್ಲೇ ನಡೆಯಲಿದೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳ ಸಮೂಹ ಕೂಡ ಕೈಜೋಡಿಸಿ ಬಲ ತುಂಬಬೇಕು ಎಂದು ಅಲ್ಲಮಪ್ರಭು ಬೆಟ್ಟದೂರು ಅವರು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕೃಷಿ ಚಿಂತಕ ದೇವೇಂದ್ರಪ್ಪ ಬಳೂಟಗಿ, ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶರಣಬಸವ ಡಾಣಿ ಹಾಗೂ ಅಮೃತರಾಜ ಜ್ಯಾನಮೋಟೆ ಅವರು ಮಾತನಾಡಿದರು. ಉಪನ್ಯಾಸಕರಾದ ಶಿವಗಂಗಾ, ಕೆಂಚರೆಡ್ಡಿ, ರವಿ ಬೇಂದ್ರೆ, ಪತ್ರಕರ್ತ ಮುಖೇಶ ನಿಲೋಗಲ್, ಹೋರಾಟಗಾರ ಬಸವರಾಜ ಗಾಣಿಗೇರ ಹಾಗೂ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೇಡಿಗಳಲ್ಲದೇ ಮತ್ಯೇನೆನ್ನಬೇಕು....?!

ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಂಜುವವರು ಹೇಡಿಗಳಲ್ಲದೇ ಮತ್ಯೇನೆನ್ನಬೇಕು ಎಂದು ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ಪ್ರಶ್ನಿಸಿದರು.

ಕೇವಲ ಪಠ್ಯದ ಬಗ್ಗೆ ಆಸಕ್ತಿ ಹೊಂದಿರದೇ ನಮ್ಮ ಭಾರತ ದೇಶದ ಸ್ವಾತಂತ್ರ್ಯ ಹೋರಾಟ ಅಥವಾ ಹೈದರಾಬಾದ್ ಪ್ರಾಂತ್ಯ ವಿಮೋಚನೆ ಹೋರಾಟ ಬಗ್ಗೆ ಇರಲಿ ಅಥವಾ ಸಮಕಾಲೀನ ಹೋರಾಟಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಬೆಳೆಸಿ ಕೊಳಬೇಕು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ