Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಡಿಗೆದಾರರೂ ಸಹ ಆಧಾರ್ ಜೋಡಣೆ ಕಡ್ಡಾಯ: ಕೆ.ಜೆ. ಜಾರ್ಜ್‌

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.16:’ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯ ಬಯಸುವವರು ಆಧಾರ್ ಸಂಖ್ಯೆಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವುದನ್ನು ಕಡ್ಡಾಯಗೊಳಿಸಿ ಇಂಧನ ಇಲಾಖೆ ಆದೇಶ ಹೊರಡಿಸಿದೆ.

ಈ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವ ಸಂಬಂಧ ಎಸ್ಕಾಂಗಳು ಪ್ರಸ್ತಾಪಿಸಿರುವ ಗೊಂದಲಗಳ ಬಗ್ಗೆ ಇಲಾಖೆ ಸ್ಪಷ್ಟೀಕರಣವನ್ನೂ ಒದಗಿಸಿದೆ. ಮುಖ್ಯವಾಗಿ ಬಾಡಿಗೆದಾರರು ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸಿ ಸೌಲಭ್ಯ ಪಡೆಯಬಹುದು.

200 ಯೂನಿಟ್ ಬಳಕೆ ಮಿತಿಯನ್ನು ಯಾವುದಾದರೂ ತಿಂಗಳಲ್ಲಿ ಮೀರಿದ್ದರೆ ಆ ತಿಂಗಳ ಪೂರ್ಣ ವಿದ್ಯುತ್ ಬಿಲ್ ಪಾವತಿಸಿ ಯೋಜನೆಯಡಿ ಮುಂದುವರೆಯಬಹುದು. ಹೊಸ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ಹಾಗೂ ಒಂದು ವರ್ಷಕ್ಕಿಂತ ಕಡಿಮೆ ಅವಧಿಗೆ ವಿದ್ಯುತ್ ಬಳಸಿದ ಗ್ರಾಹಕರಿಗೆ ರಾಜ್ಯದ ಗೃಹ ಬಳಕೆದಾರರು ಸರಾಸರಿ ಬಳಕೆಯ ಪ್ರಮಾಣವಾದ ಮಾಸಿಕ 53 ಯೂನಿಟ್‌ಗಳನ್ನು ಗೊತ್ತುಪಡಿಸಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಇಲಾಖೆ ಸ್ಪಷ್ಟನೆ ನೀಡಿದೆ.

ಚಿಕ್ಕಮಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಧನ ಖಾತೆ ಸಚಿವ ಕೆ.ಜೆ ಜಾರ್ಜ್, ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಯೋಜನೆಯಲ್ಲಿ 200 ಯುನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಈ ತಿಂಗಳ 18 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ 16 ಲಕ್ಷ ಕುಟುಂಬಗಳಿಗೆ ಯೋಜನೆಯ ಲಾಭ ಸಿಗಲಿದೆ ಎಂದ ಅವರು, 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿ ಪ್ರಮಾಣವನ್ನು ಪರಿಗಣಿಸಿ ಈ ಯೋಜನೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯುತ್ ದರ ಏರಿಕೆ ಕುರಿತು ಸ್ಪಷ್ಠನೆ ನೀಡಿದ ಸಚಿವರು, ರಾಜ್ಯ ಸರ್ಕಾರ ದರ ಏರಿಕೆ ಮಾಡಿಲ್ಲ. ಬೆಲೆ ಏರಿಕೆ ದರ ಅಧಿಕಾರ ಕೆ.ಇ.ಆರ್.ಸಿ ಸಂಸ್ಥೆಗೆ ಇದ್ದು, ಯುನಿಟ್‌ಗೆ 70 ಪೈಸೆ ಏರಿಕೆ ಮಾಡಿದೆ ಅಲ್ಲದೆ ದರ ಏರಿಕೆಯನ್ನು ಮೇ 12 ರಿಂದ ಜಾರಿಗೊಳಿಸಿದೆ. ಏಪ್ರಿಲ್ ತಿಂಗಳಿನಿಂದ ಬಾಕಿ ಇದ್ದ ವಿದ್ಯುತ್ ದರವನ್ನು ಸೇರಿಸಿಕೊಂಡು ಬಿಲ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ದರ ಏರಿಕೆಯಿಂದ ಸಣ್ಣ ಕೈಗಾರಿಕೋದ್ಯಮಿಗಳಿಗೆ, ಕಾರ್ಖಾನೆಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ