Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

223 ಕೋಟಿ ರೂ. ಮೊತ್ತದ ವಾಹನ ಖರೀದಿಯಲ್ಲಿ ಅವ್ಯವಹಾರ: ಎಎಪಿ ಆರೋಪ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.21: ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ ಈ ಪೈಕಿ ಶೇ. 90ರಷ್ಟು ಜನರಿಗೆ ವಾಹನ ವಿತರಿಸಿಲ್ಲ. ಇದು 223 ಕೋಟಿ ಹಣ ರೂ. ಮೊತ್ತದ ಯೋಜನೆಯಾಗಿದ್ದು, ಈ ಹಣ ಎಲ್ಲಿಗೆ ಹೋಗಿದೆ ಎಂಬ ಬಗ್ಗೆ ತನಖೆಯಾಗಬೇಕು. ಚುನಾವಣಾ ಆಯೋಗ ಈ ಬಗ್ಗೆ ನಿಗಾ ವಹಿಸಬೇಕು” ಎಂದು ಆಗ್ರಹಿಸಿದರು.

“ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಜಾತಿಗೆ ಸೇರಿದ ಪ್ರಲ್ಹಾದ್‌ ಜೋಷಿ ಮುಖ್ಯಮಂತ್ರಿಯಾಗಬಹುದು ಎಂದು ಜೆಡಿಎಸ್‌ ಪಕ್ಷದ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ, ಬಿ.ಎಲ್.ಸಂತೋಷ್‌ರವರು ಏಳೆಂಟು ಅಭ್ಯರ್ಥಿಗಳನ್ನು ಬದಲಿಸಿ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಲ್ಹಾದ್‌ ಜೋಷಿ ಹಾಗೂ ಬಿ.ಎಲ್.ಸಂತೋಷ್‌ ನಡುವೆ ಪೈಪೋಟಿಯಿರುತ್ತದೆ ಎನ್ನುವುದು ಇದರಿಂದ ಸಾಬೀತಾಗಿದೆ. ಬೆಂಗಳೂರಿನ ಅಕ್ಕಪಕ್ಕದ ಐದು ಕ್ಷೇತ್ರಗಳಾದ ಜಯನಗರ, ಬಸವನಗುಡಿ, ಚಿಕ್ಕಪೇಟೆ, ರಾಜಾಜಿನಗರ, ಚಾಮರಾಜಪೇಟೆ ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದರಿಂದ ಬಿಜೆಪಿ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಐದು ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಆದ್ದರಿಂದ ನಾವು ಈ ವಿಷಯವನ್ನು ಜನರ ಮುಂದಿಡುತ್ತಿದ್ದೇವೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ಮಾಧ್ಯಮ ವಕ್ತಾರರಾದ ಉಷಾ ಮೋಹನ್‌ ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ