Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2ಬಿ ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ.27: ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಆಮ್‌ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್‌ ಷರೀಫ್‌ ಖಂಡಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಫರೀದುದ್ದೀನ್‌ ಷರೀಫ್‌, “ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ಯಾರೂ ಕೂಡ ಪ್ರಶ್ನಿಸಿರಲಿಲ್ಲ. ಇದನ್ನು ರದ್ದು ಪಡಿಸಬೇಕೆಂದು ನ್ಯಾಯಾಲಯದ ಆದೇಶ ಕೂಡ ಇಲ್ಲ. ಆದರೂ, ರಾಜ್ಯ ಬಿಜೆಪಿ ಸರ್ಕಾರವು ಯಾವುದೇ ಮುನ್ಸೂಚನೇ ನೀಡದೇ, ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಮೀಸಲಾತಿ ರದ್ದು ನಿರ್ಣಯವನ್ನು ಘೋಷಿಸಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸಿರುವುದು ಕಂಡುಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಅಶಾಂತಿ ಸೃಷ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ” ಎಂದು ಆರೋಪಿಸಿದರು.

“ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಸ್ಲಿಂ ಸಮುದಾಯ ಹಿಂದುಳಿದೆ. ಅಲ್ಪಸಂಖ್ಯಾತ ಸಮುದಾಯವೆಂಬ ಕಾರಣಕ್ಕೆ ಮುಸ್ಲಿಮರ ಮೇಲೆ ಶೋಷಣೆ ಮಾಡುತ್ತಿರುವ ಘಟನೆಗಳನ್ನು ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮೀಸಲಾತಿ ರದ್ದು ಪಡಿಸಿರುವುದು ಸಮುದಾಯದಲ್ಲಿ ಆತಂಕ ಸೃಷ್ಟಿಸಿದೆ. ಮೀಸಲಾತಿ ಪಡೆಯುವುದು ಮುಸ್ಲಿಮರ ಸಾಂವಿಧಾನಿಕ ಹಕ್ಕಾಗಿದ್ದು, ಇಡಬ್ಲ್ಯುಎಸ್‌ ಬದಲು 2ಬಿ ಕೆಟಗರಿಯನ್ನು ಮುಂದುವರಿಸಬೇಕು. ಈ ಕುರಿತು ರಾಜ್ಯಪಾಲರಿಗೂ ದೂರು ನೀಡಿ, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಲು ನಿರ್ಧರಿಸಿದ್ದೇವೆ” ಎಂದು ಫರೀದುದ್ದೀನ್‌ ಷರೀಫ್‌ ಹೇಳಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ