Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಕರ್ತರ ಶ್ರಮಕ್ಕೆ ಸಿಕ್ಕ ಜಯ : ಶಿವರಾಜ ಪಾಟೀಲ್ ರದ್ದೆವಾಡಗಿ

ಸುದ್ದಿಮೂಲ ವಾರ್ತೆ

ಜೇವರ್ಗಿ,ಆ.1: ತಾಲೂಕಿನ ಕೊಳಕೂರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ನೀಲಮ್ಮ ಬಸವರಾಜ್ ಕಟ್ಟಿ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಶಾಮರಾವ್ ಗುಂಡೆದ ಆಯ್ಕೆಯಾದರು.

ಮಂಗಳವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಒಟ್ಟು17 ಮತಗಳಲ್ಲಿ14 ಮತಗಳು ಪಡೆದ ನೀಲಮ್ಮ ಬಸವರಾಜ್ ಕಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ವಿಜಯಲಕ್ಷ್ಮಿ ಶಾಮರಾವ್ ಗುಂಡೆದ 17 ಮತಗಳಲ್ಲಿ 10 ಮತಗಳು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ವಿಜಯೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೆವಾಡಗಿ ಅವರು, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ, ತಾಲೂಕಿನ ಬಿಜೆಪಿ ಕಾರ್ಯಕರ್ತರು ಬಹಳ ಶ್ರಮಪಟ್ಟು ಪಕ್ಷದ ಕೆಸಲವನ್ನು ಮಾಡುತ್ತಾರೆ. ಅವರ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎನ್ನುವುದಕ್ಕೆ ಇದು ಒಂದು ಉದಾಹರಣೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕರ್ತರು ಪಕ್ಷದ ಏಳಿಗೆಗೆ ಶ್ರಮಿಸಿ ಪಕ್ಷಕ್ಕೆ ನ್ಯಾಯಯುತವಾಗಿ ದುಡಿದರೆ ಪಕ್ಷದಿಂದ ಒಂದಿಲ್ಲೊಂದು ರೀತಿಯಲ್ಲಿ ಅಧೀಕಾರ ಸಿಗುತ್ತದೆ. ಕೊಳಕೂರ ಗ್ರಾಮದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ನಮ್ಮಗೆ ಹಾಗೂ ನಮ್ಮ ಪಕ್ಷಕ್ಕೆ ತುಂಬಾ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಮಲ್ಲನಗೌಡ ರದ್ದೇವಾಡಗಿ, ಗುರುಶಾಂತಗೌಡ ಸಿಕ್ಕಿದ್, ಅಶೋಕ್ ಗೌನಳ್ಳಿ, ಬಾಪುಗೌಡ ಗೌನಳ್ಳಿ, ವೀರಣ್ಣ ಗುತ್ತ, ಮಲ್ಲಣ್ಣ ಕುಲಕರ್ಣಿ, ಆನಂದ ಹೊಸಮನಿ, ತಿಪ್ಪಣ್ಣಗೌಡ ಗೌನಳ್ಳಿ, ರಾಯಪ್ಪ ಕೋಳಕೂರ, ಬಸವರಾಜ ಕಟ್ಟಿ, ಈರಣ್ಣ ಯಾದವ್, ಪಿರಣ್ಣ ಗುತ್ತ, ಈರಣ್ಣ ಕಂಬಾರ, ಗುಂಡೆರಾಯ ಬೈರಾಮಡಗಿ, ಬಾಗಣ್ಣ ಯಾದವ, ಮಲ್ಲಣ್ಣ ತೊಟ್ನಳ್ಳಿ, ಭೀಮಣ್ಣ ನಾಟೀಕರ್, ಬಸಣ್ಣ ಹನೂರ, ಸಿದ್ದು ಕೂಡಿ, ಹಣಮಂತ್ರಾಯ ಗೌನಳ್ಳಿ ಸೆರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ