Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮನೆಯಲ್ಲೇ ಕುಳಿತು ಖಾತೆ ಬದಲಾವಣೆ

ಸುದ್ದಿಮೂಲ ವಾರ್ತೆ ಬೆಂಗಳೂರು, ೆ.24:
ಮನೆಯಲ್ಲಿ ಕುಳಿತೇ ಜಮೀನಿನ ಖಾತೆ ಬದಲಾವಣೆಯನ್ನು ಮಾಡಿಕೊಳ್ಳುವಂತಹ ಸ್ವಯಂ ಚಾಲಿತ ಮ್ಯುಟೇಶನ್ ಸೌಲಭ್ಯಕ್ಕೆೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ಚಾಲನೆ ನೀಡಿದರು.
ಮಂಗಳವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್‌ಗೆ ಚಾಲನೆ ನೀಡಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಹೇಳಿದರು.
ಕಂದಾಯ ಇಲಾಖೆಯನ್ನು ಜನಪರ ಗೊಳಿಸಬೇಕು, ಆಡಳಿತದಲ್ಲಿ ಸುಧಾರಣೆ ಮತ್ತು ಸರಳೀಕರಣ ಮಾಡುವ ನಿಟ್ಟಿಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಹೆಜ್ಜೆೆ ಹೆಜ್ಜೆೆ ಗೂ ಹಲವಾರು ಬದಲಾವಣೆಗಳನ್ನು ತರಲಾಗುತ್ತಿಿದೆ. ಆ ಬದಲಾವಣಾ ಪರ್ವದ ಮತ್ತೊೊಂದು ಮಹತ್ವದ ಹೆಜ್ಜೆೆಯೇ ಸ್ವಯಂ ಚಾಲಿತ ಮ್ಯುಟೇಶನ್‌ಗೆ ಚಾಲನೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾಾನಗೊಳಿಸಿ ಸಾಧಕ ಪರಿಶೀಲಿಸಿ ಇಂದಿನಿಂದ ಶೇ.98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲು ಮುನ್ನುಡಿ ಇಟ್ಟಿಿದ್ದೇವೆ ಎಂದು ಹೇಳಿದರು.
ಖಾತೆ ಬದಲಾವಣೆ ಕಂದಾಯ ಇಲಾಖೆಯ ಮೂಲ ಜವಾಬ್ದಾಾರಿಗಳಲ್ಲೊಂದು. ಇದಕ್ಕಾಾಗಿ ಜನ ಸಾಮಾನ್ಯರು ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆಯುವುದು ಸಾಮಾನ್ಯವಾಗಿತ್ತು. ಕೆಲ ಅಧಿಕಾರಿಗಳ ಸ್ವೇಚ್ಛಾಾಚಾರದಿಂದ, ಅವ್ಯವಸ್ಥೆೆ ಮತ್ತು ಮಧ್ಯವರ್ತಿಗಳ ಕಿರುಕುಳದಿಂದ ಸಾರ್ವಜನಿಕರು ಶೋಷಣೆಗೆ ಒಳಗಾಗುತ್ತಿಿದ್ದರು. ಇದರಿಂದ ಸರ್ಕಾರಕ್ಕೂ ಕೆಟ್ಟ ಹೆಸರು ಉಂಟಾಗುತ್ತಿಿತ್ತು. ಪ್ರಸ್ತುತ ಸ್ವಯಂ ಚಾಲಿತ ಮ್ಯುಟೇಷನ್‌ಗೆ ಚಾಲನೆ ನೀಡಲಾಗಿದ್ದು, ಈ ಎಲ್ಲಾ ಸಮಸ್ಯೆೆಗಳಿಗೂ ಶಾಶ್ವತ ಪರಿಹಾರ ನೀಡಿದಂತಾಗಿದೆ. ಇನ್ನೂ ಜನ ಸಾಮಾನ್ಯರು ಖಾತೆ ಬದಲಾವಣೆಗಾಗಿ ಸರ್ಕಾರಿ ಕಚೇರಿಗೆ ಅಲೆಯುವಂತಿಲ್ಲ. ಮನೆಯಲ್ಲೇ ಕುಳಿತು ಮೋಬೈಲ್ ಮೂಲಕ ಆನ್‌ಲೈನ್‌ಲ್ಲೇ ತಮ್ಮ ಖಾತೆ ಬದಲಾವಣೆ ಕೆಲಸಗಳನ್ನು ನಿರ್ವಹಿಸಬಹುದು ಎಂದು ವಿವರಿಸಿದರು.
ಖಾತೆ ಬದಲಾವಣೆ ಹೇಗೆ? : ಆನ್‌ಲೈನ್ ಮೂಲಕ ಖಾತೆ ಬದಲಾವಣೆಗೆ ಮನವಿ ಸಲ್ಲಿಸಿದರೆ 7 ದಿನ ನೊಟೀಸ್ ಅವಧಿ ಇರುತ್ತದೆ. ಈ ಅವಧಿಯಲ್ಲಿ ಯಾರು ಬೇಕಾದರೂ ಭೂಮಿ ತಂತ್ರಾಾಂಶದ ಮೂಲಕ ತಕರಾರು ಸಲ್ಲಿಸಬಹುದು. ಯಾರೂ ತಕರಾರು ಸಲ್ಲಿಸದಿದ್ದರೆ ಎಂಟನೇ ದಿನ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗುತ್ತದೆ. ನೋಂದಣಿಯೇತರವಾಗಿ ಖಾತೆ ಬದಲಾವಣೆಗೆ ಮನವಿ ಬಂದಂತಹ ಪ್ರಕರಣಗಳಿಗೆ 15 ದಿನ ನೊಟೀಸ್ ಅವಧಿ ಇದ್ದು, ತಕರಾರು ಸಲ್ಲಿಸಬಹುದಾಗಿದೆ. ತಕರಾರು ಇಲ್ಲದಿದ್ದರೆ 16ನೇ ದಿನ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗಲಿದೆ ಎಂದು ತಿಳಿಸಿದರು.
2024 ಏಪ್ರಿಿಲ್ 01 ರಿಂದ 2026 ೆಬ್ರವರಿ 20ರ ವರೆಗಿನ ಅವಧಿಯಲ್ಲಿ 35,11,987 ಖಾತೆ ಬದಲಾವಣೆಯನ್ನು ಸ್ವಯಂ ಚಾಲಿತವಾಗಿ ಮಾಡಿದ್ದರೆ, ಕೇವಲ 5207 ಪ್ರಕರಣಗಳಲ್ಲಿ ಮಾತ್ರ ತಕರಾರು ದಾಖಲಾಗಿವೆ. ಅಂದರೆ ನಾವು ಒಟ್ಟು ಮ್ಯುಟೇಶನ್ ಶೇ.98 ರಷ್ಟು ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆ ಮಾಡಿದಂತಾಗಿದೆ. ತಕರಾರು ದಾಖಲಿಸಿದ ಪ್ರಕರಣಗಳನ್ನೂ 60 ದಿನಗಳಲ್ಲಿ ಇತ್ಯರ್ಥಗೊಳಿಸಿ ಆದೇಶ ಹೊರಡಿಸುತ್ತಿಿದ್ದೇವೆ ಎಂದು ವಿವರಿಸಿದರು.
ಪಹಣಿ ಜೊತೆಗೆ ಆಧಾರ್ ಜೋಡಿಸಲು ಮನವಿ : ನಕಲಿ ವಹಿವಾಟು ತಪ್ಪಿಿಸಿ ಆಸ್ತಿಿ ಮಾಲೀಕತ್ವವನ್ನು ಮತ್ತಷ್ಟು ಸುಭದ್ರಗೊಳಿಸಲು ಸಾರ್ವಜನಿಕರು ತಮ್ಮ ಪಹಣಿಯ ಜೊತೆಗೆ ಆಧಾರ್ ಜೋಡಣೆಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಹಣಿಯ ಜೊತೆಗೆ ಆಧಾರ್ ಜೋಡಣೆಯಾದರೆ ಪಹಣಿಯಲ್ಲಿ ಏನೇ ಬದಲಾವಣೆ ಆದರೂ ಆ ಸಂದೇಶ ವನ್ನು ಆಸ್ತಿಿ ಮಾಲೀಕರ ಮೊಬೈಲ್‌ಗೆ ಕಳುಹಿಸಲಾಗುತ್ತದೆ. ಆಗ ಆಸ್ತಿಿ ಮಾಲೀಕರ ಗಮನಕ್ಕೆೆ ಬಾರದೆ ನಡೆಯುವ ಖಾತೆ ಬದಲಾವಣೆ ಅಥವಾ ಮಾರಾಟವನ್ನು ತಡೆಯಬಹುದು. ಆ ಮೂಲಕ ಆಸ್ತಿಿ ಮಾಲೀಕತ್ವಕ್ಕೆೆ ಖಾತರಿ ಪಡೆಯಬಹುದು. ಇದಲ್ಲದೆ, ನ್ಯಾಾಯಾಲಯ ಆದೇಶ ನಮೂದಿಸಿದರೆ ಅಥವಾ ಪಹಣಿಯಲ್ಲಿ ಬೇರೆಯವರ ಹೆಸರು ಸೇರಿಸಿದರೂ ಸಹ ಎಸ್‌ಎಂಎಸ್ ಮೂಲಕ ಮಾಹಿತಿ ಬರುತ್ತೆೆ. ಆಧಾರ್ ಜೋಡಣೆ ಮಾಡದಿದ್ದರೆ ಆಸ್ತಿಿ ಮಾಲೀಕರ ಗಮನಕ್ಕೆೆ ಬಾರದೆ ಖಾತೆ ಬದಲಾವಣೆ ಆಗುವಂತಹ ಅಪರೂಪದ ಸಾಧ್ಯತೆಗಳಿವೆ. ಹೀಗಾಗಿ ಮಾಲಿಕತ್ವ ಸುಭದ್ರವಾಗಿರಬೇಕಾದರೆ ಮೊದಲು ಪಹಣಿ ಜೊತೆಗೆ ಆಧಾರ್ ಜೋಡಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್ ಉಪಸ್ಥಿಿತರಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ತಹಶೀಲ್ದಾಾರರು ಸೇರಿದಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳೂ ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ