Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಿನಿ ಬ್ರ್ಯಾಂಡ್‌ ಗೆ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.1 : ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಬ್ರ್ಯಾಂಡ್‌ನ ರಾಯಭಾರಿಯಾಗಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಎಸ್. ಭೀಮಾನಾಯ್ಕ ಅವರು ಡಾ. ಶಿವ ರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.

ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಬ್ರಾಂಡ್ ಗೆ ಇನ್ಮುಂದೆ ಡಾ.ಶಿವರಾಜ್ ಕುಮಾರ್ ರಾಯಭಾರಿ ಆಗಿ ಕಾರ್ಯನಿರ್ವಹಿಸಲಿದ್ದಾರೆ. ನಂದಿನಿ ಹಾಲಿಗೆ ರಾಯಭಾರಿಯಾಗಲು ಹ್ಯಾಟ್ರಿಕ್‌ ಹೀರೊ ಶಿವರಾಜ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ನಂದಿನಿ ಬ್ರಾಂಡ್ ಗೆ ರಾಯಭಾರಿಯಾಗುವಂತೆ ಕೆಎಂಎಫ್ ಕೇಳಿಕೊಮಡಿತ್ತು. ಕೆಎಂಎಫ್ ಮನವಿಗೆ ರಾಯಭಾರಿಯಾಗಲು ಒಪ್ಪಿದ ಬೆನ್ನಲ್ಲಿಯೇ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಶಿವರಾಜ್‌ಕುಮಾರ್‌ ಮನೆಗೆ ತೆರಳಿ ಪುಷ್ಪುಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಹಿಂದೆ ವರನಟ ಡಾ. ರಾಜ್‌ ಕುಮಾರ್‌ ಅವರು ನಂದಿನಿಗೆ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿದ್ದರು. ಇದಾದ ನಂತರ ಪುನೀತ್‌ ರಾಜ್‌ ಕುಮಾರ್‌ ಅವರು ಕೂಡ ನಂದಿನಿ ಬ್ರ್ಯಾಂಡ್‌ಗೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ವೇಳೆ ನಂದಿನಿ ಹಾಲಿನ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಹೆಚ್ಚು ಮನ್ನಣೆಯನ್ನು ಪಡೆದುಕೊಂಡಿತ್ತು. ಇನ್ನು ರಾಜ್ಯದ ಎಲ್ಲೆಡೆ ನಂದಿನಿ ಬ್ರ್ಯಾಂಡ್‌ ರಾಯಭಾರಿಯಾಗಿ ಪುನೀತ್‌ ಆಯ್ಕೆಯಾದ ನಂತರ ಗ್ರಾಹಕರ ಸಂಖ್ಯೆಯಲ್ಲಿಯೂ ಹೆಚ್ಚಳ ಆಗಿತ್ತು ಎಂದು ತಿಳಿದುಬಂದಿತ್ತು. ಈಗ ಕೆಎಂಎಫ್‌ ಮನವಿ ಮೇರೆಗೆ ರಾಜ್‌ಕುಮಾರ್ ಕುಟುಂಬದ ಶಿವರಾಜ್‌ಕುಮಾರ್‌ ರಾಯಭಾರಿ ಆಗಲು ಒಪ್ಪಿಕೊಂಡಿದ್ದಾರೆ.

ಡಾ.ರಾಜ್‌ಕುಮಾರ್ ಕುಟುಂಬವು ನಂದಿನಿ ಬ್ರ್ಯಾಂಡ್‌ ರಾಯಭಾರಿಯಾಗಿ ಪ್ರಚಾರವನ್ನು ಕೈಗೊಂಡು ರಾಜ್ಯದ ರೈತರ ಹಿತಾಸಕ್ತಿಯನ್ನು ಹೊಂದಿರುವುದು ಅಭಿನಂದನಾರ್ಹ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ