Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭೆ ಕಲಾಪ ನುಂಗಿದ ಜಾಹೀರಾತು

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.29:
ಸಾರ್ವಜನಿಕರ ತೆರಿಗೆ ಹಣದಿಂದ ಕೇಂದ್ರ ಸರ್ಕಾರದ ವಿರುದ್ಧ ಇಲಾಖೆ ಈ ಜಾಹೀರಾತು ನೀಡಿದೆ. ಇದು ಸೇಡಿನ, ದ್ವೇಷದ ರಾಜಕಾರಣ. ತೆರಿಗೆ ಹಣದ ಲೂಟಿ’ ಎಂದು ಸದನದಲ್ಲಿ ಈ ವಿಷಯ ಪ್ರಸ್ತಾಾಪಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್ ವಾಗ್ದಾಾಳಿ ನಡೆಸಿದರು. ವಿರೋಧ ಪಕ್ಷದ ಇತರ ಸದಸ್ಯರೂ ದನಿಗೂಡಿಸಿದರು.
ಬಿಜೆಪಿ ಉಚ್ಚಾಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಾಳ್, ಯಾರಪ್ಪನ ದುಡ್ಡು ಇದು? ನೀವು ಕೇಂದ್ರ ಸರ್ಕಾರವನ್ನು ಟೀಕಿಸುವುದಾದರೆ ಕಾಂಗ್ರೆೆಸ್ ಪಕ್ಷದಿಂದ ಜಾಹೀರಾತು ಕೊಡಬೇಕಿತ್ತು’ ಎಂದು ಅಬ್ಬರಿಸಿದರು.
ಒಕ್ಕೂಟ ವ್ಯವಸ್ಥೆೆಯಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಪಕ್ಷ ಒಪ್ಪದಿದ್ದರೂ ಸರ್ಕಾರ ಒಪ್ಪಬೇಕು. ಕೇಂದ್ರ ಸರ್ಕಾರದ ಯೋಜನೆ ವಿರುದ್ಧ ಜಾಹೀರಾತು ನೀಡಿರುವ ಈ ಸರ್ಕಾರಕ್ಕೆೆ ನಾಚಿಕೆಯಾಗಬೇಕು’ ಎಂದು ಬಿಜೆಪಿಯ ವಿ. ಸುನಿಲ್ ಕುಮಾರ್‌ಟೀಕಿಸಿದರು. ದನಿಗೂಡಿಸಿದ ಯತ್ನಾಾಳ್, ನಕಲಿ ಗಾಂಧಿಗಳನ್ನು ಮೆಚ್ಚಿಿಸಲು ನರೇಗಾ ಹಿಡಿದುಕೊಂಡಿದ್ದಾರೆ’ ಎಂದು ಹರಿಹಾಯ್ದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ತೆರಿಗೆ ಭಯೋತ್ಪಾಾದನೆ’ಯ ಆರೋಪ ಮಾಡುತ್ತಿಿದೆ. ರಾಜ್ಯ-ಕೇಂದ್ರದ ಸಂಬಂಧ ಹಾಳು ಮಾಡುವ ಕೆಲಸವನ್ನು ಕಾಂಗ್ರೆೆಸ್ ಮಾಡುತ್ತಿಿದೆ. ಇದನ್ನು ಪ್ರತಿಭಟಿಸಿ ಸಭಾತ್ಯಾಾಗ ಮಾಡುತ್ತಿಿದ್ದೇವೆ’ ಎಂದು ಹೇಳಿ ಸದಸ್ಯರ ಜತೆ ಸದನದಿಂದ ಹೊರನಡೆದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ