Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪನೆ

ಸುದ್ದಿಮೂಲ ವಾರ್ತೆ

ಬೆಂಗಳೂರು: ನ.30: ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

ಸಮಸಮಾಜದ ಕನಸು ಕಂಡಿದ ದಾಸಶ್ರೇಷ್ಠ:

ಕನಕದಾಸರು ಸಮಾಜಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನ ತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಎಲ್ಲ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ಕೋರಿದರು.

ಶಾಸಕ ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳು ಭೇಟಿಯಾಗಿರುವ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿ.ಆರ್.ಪಾಟೀಲ್ ಅವರೊಂದಿಗೆ ಚರ್ಚಿಸಲಾಗಿತ್ತು, ಅವರು ಅಧಿವೇಶನಕ್ಕೆ ಆಗಮಿಸಲು ಮನವೊಲಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನಿಮಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ರೋಗಿಯೊಬ್ಬರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮಾನ್ಸ್ ನಿರ್ದೇಶಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ